ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರು ಕೇಂದ್ರ ಸರ್ಕಾರದ ಜೊತೆ ಒಂದೊಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಅಲ್ಲದೇ ರಾಷ್ಟ್ರಪ್ರೇಮವನ್ನು ಸಾರುವಂತಹ ಸಾಕಷ್ಟು ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಹೀಗಾಗಿ ಅಕ್ಷಯ್ ಕುಮಾರ್ ಸಿನಿಮಾ ಬಂದಾಗೆಲ್ಲ ಕೇಂದ್ರ ಸರ್ಕಾರದ ಹಲವು ಮಂತ್ರಿಗಳು ಮತ್ತು ಸಂಸದರು ಅವರು ಚಿತ್ರಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ : ಸದ್ದಿಲ್ಲದೇ ಶುರುವಾಯ್ತು ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ : ಮೊದಲ ದಿನವೇ ಫೋಟೋ ಲೀಕ್
ಈ ಬಾರಿ ಅಕ್ಷಯ್ ಕುಮಾರ್ ‘ಪೃಥ್ವಿರಾಜ್’ ಹೆಸರಿನಲ್ಲಿ ಸಿನಿಮಾ ಮಾಡಿದ್ದು, ಈ ಸಿನಿಮಾವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೋಡಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ಕುರಿತು ಚಿತ್ರತಂಡ ಅಮಿತ್ ಶಾ ಜೊತೆ ಮಾತುಕತೆ ಕೂಡ ಆಡಿದೆ ಎಂದು ಹಾಗೂ ಅವರು ಕೂಡ ಸಿನಿಮಾವನ್ನು ನೋಡಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ : ಧನುಶ್ ನಟನೆಯ ಹಾಲಿವುಡ್ ಸಿನಿಮಾದ ಟ್ರೇಲರ್ ರಿಲೀಸ್ : ಎಲ್ಲಿದ್ದಾರೆ ಧನುಶ್?
ಇದೇ ಜೂನ್ 3 ರಂದು ಪೃಥ್ವಿರಾಜ್ ಸಿನಿಮಾ ಹಿಂದಿ ಮಾತ್ರವಲ್ಲದೇ ತೆಲುಗು ಮತ್ತು ತಮಿಳಿಗೂ ಡಬ್ ಆಗಿ ರಿಲೀಸ್ ಆಗುತ್ತಿದೆ. ಜೂ 1 ರಂದು ಚಿತ್ರತಂಡವು ದೆಹಲಿಯಲ್ಲಿ ವಿಶೇಷ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಈ ವಿಶೇಷ ಪ್ರದರ್ಶನಕ್ಕೆ ಕೇಂದ್ರ ಹಲವು ಮಂತ್ರಿಗಳನ್ನು ಮತ್ತು ಸಂಸದರನ್ನು ಹಾಗೂ ಉನ್ನತ ಮಟ್ಟದ ಅಧಿಕಾರಿಗಳನ್ನು ಆಹ್ವಾನಿಸಲಾಗಿದ್ದು, ಅಂದೇ ಅಮಿತ್ ಶಾ ಅವರು ಕೂಡ ಈ ಸಿನಿಮಾವನ್ನು ವೀಕ್ಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ : ಕೆಜಿಎಫ್ 2 ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಈ ಸಿನಿಮಾವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶನ ಮಾಡಿದ್ದು, ಯಶ್ ರಾಜ್ ಫಿಲ್ಮ್ಸ್ ಲಾಂಛನದಲ್ಲಿ ತಯಾರಾಗಿದೆ. ಪೃಥ್ವಿರಾಜ್ ಚಹಾಣ್ ಪಾತ್ರದಲ್ಲಿ ಅಕ್ಷಯ್ ಕುಮಾರ್ ಬಣ್ಣ ಹಚ್ಚಿದ್ದಾರೆ. ಇದೊಂದು ಐತಿಹಾಸಿಕ ಸಿನಿಮಾವಾಗಿದ್ದು, ವೀರ ಪೃಥ್ವಿರಾಜ್ ಅವರ ಹೋರಾಟದ ಕಥೆಯನ್ನು ಚಿತ್ರ ಹೊಂದಿದೆ. ಯುದ್ಧ ಸನ್ನಿವೇಶಗಳು ಸೇರಿದಂತೆ ಅಚ್ಚರಿ ಪಡೆಯುವಂತಹ ಅನೇಕ ಸನ್ನಿವೇಶಗಳು ಈ ಸಿನಿಮಾದಲ್ಲಿವೆ.