ಮಂಗಳೂರು: ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ದೀಪಕ್ ರಾವ್ ಮನೆಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹಗ್ಡೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಸುರತ್ಕಲ್ ಸಮೀಪದ ಕಾಪಟಿಪಾಳ್ಯದಲ್ಲಿ ಹಾಡಹಗಲೇ ದುಷ್ಕರ್ಮಿಗಳ ಮಾರಣಾಂತಿಕ ದಾಳಿಯಿಂದ ಮೃತ ಪಟ್ಟಿದ್ದ ದೀಪಕ್ ರಾವ್ ಅವರ ಮನೆಗೆ ಭೇಟಿ ನೀಟಿದ ಅನಂತ್ ಕುಮಾರ್ ಹೆಗ್ಡೆ, ಅನಿರೀಕ್ಷಿತವಾಗಿ ದೀಪಕ್ ರಾವ್ ಅವರ ಹತ್ಯೆ ಆಗಿದೆ. ಅವರ ಕುಟಂಬಕ್ಕೆ ಸಾಂತ್ವನ ಹೇಳಲು ಇಲ್ಲಿಗೆ ಭೇಟಿ ನೀಡಿದ್ದು. ಅವರ ಕುಟುಂಬದ ಜೊತೆ ನಾವೆಲ್ಲರೂ ಇದ್ದೇವೆ ಎಂದು ಹೇಳಿದರು.
Advertisement
Advertisement
ಇದೇ ವೇಳೆ ದೀಪಕ್ ಸಹೋದರ ಸತೀಶ್ ಅವರಿಗೆ ಕುದುರೆಮುಖ ಕಂಪೆನಿಯಲ್ಲಿ ಉದ್ಯೋಗ ಒದಗಿಸುವ ಭರವಸೆ ನೀಡಿದರು.ಅಲ್ಲದೇ ಸಚಿವರು ದೀಪಕ್ ರಾವ್ ಅವರ ಕುಟುಂಬಕ್ಕೆ ವೈಯುಕ್ತಿಕ 25 ಸಾವಿರ ರೂ. ನೆರವು ನೀಡಿದರು.
Advertisement
ಜ.3ರಂದು ಮಧ್ಯಾಹ್ನ 1.30ರ ಸುಮಾರಿಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯದ್ವಾತದ್ವಾ ದೀಪಕ್ ರಾವ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು. ಕೂಡಲೇ ಮಾಹಿತಿ ಪಡೆದ ಪೊಲೀಸರು ಸಿನಿಮೀಯ ರೀತಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿ ಬಂಧಿಸಿದ್ದರು. ಸದ್ಯ ಅವರನ್ನು ಅಜ್ಞಾತ ಸ್ಥಳದಲ್ಲಿರಿಸಿ ವಿಚಾರಣೆ ಮುಂದುವರೆಸಿದ್ದಾರೆ. ಅಲ್ಲದೇ ಬಂಧಿತರಿಂದ ಪಡೆದ ಮಾಹಿತಿ ಆಧಾರಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸೋಮವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.