ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನಲೆಯಲ್ಲಿ ಇಂದು ಶಾಲಾ-ಕಾಲೇಜಿಗೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ.
ರಾಜ್ಯಾದ್ಯಂತ ಶಾಲಾ-ಕಾಲೇಜಿಗೆ ಮತ್ತು ಕಚೇರಿಗೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಸಕಲ ಗೌರವದೊಂದಿಗೆ ಅನಂತ ಕುಮಾರ್ ಅವರ ಅಂತ್ಯಕ್ರಿಯೆ ಮಾಡಲಾಗುತ್ತಿದೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಯ ಮುಖಂಡ ಎಚ್.ಎನ್. ಅನಂತಕುಮಾರ್ (59) ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆದರೆ ಇಂದು ನಸುಕಿನ ಜಾವ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇಂದು ಬೆಳಗ್ಗೆ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ. ಬೆಳಗ್ಗೆ 9 ಗಂಟೆಯ ನಂತರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews