ನವದೆಹಲಿ: ಹೆಜ್ಜಾಲ – ಚಾಮರಾಜನಗರ ನಡುವಿನ ರೈಲ್ವೆ ಯೋಜನೆಯನ್ನು (Hejjala – Chamarajanagar railway project) ಮುಂಬರುವ ಕೇಂದ್ರ ಬಜೆಟ್‍ನಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ.
ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರು ಬರೆದಿದ್ದ ಪತ್ರಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಂಬರುವ ಕೇಂದ್ರ ಬಜೆಟ್‍ನಲ್ಲಿ ಈ ಯೋಜನೆಯನ್ನು ಸೇರಿಸುವುದಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರಿಗೆ (H.D Kumaraswamy) ಬರೆದ ಪತ್ರದಲ್ಲಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ದೇವದಾರಿ ಗಣಿ ಯೋಜನೆ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಸಂಚು: ಹೆಚ್‌ಡಿಕೆ
ಹೆಜ್ಜಾಲ-ಚಾಮರಾಜನಗರ ನಡುವಿನ ಮಾರ್ಗವು ಕನಕಪುರ, ಮಳವಳ್ಳಿ, ಕೊಳ್ಳೇಗಾಲ, ಯಳಂದೂರು ಮಾರ್ಗವಾಗಿ ಹಾದು ಹೊಗಳಿದೆ. ಈ ಯೋಜನೆ ಈ ಭಾಗದ ಜನರ ಬಹುದಿನಗಳ ಕನಸಾಗಿದೆ. ಈ ರೈಲ್ವೆ ಮಾರ್ಗವನ್ನು ಮಂಜೂರು ಮಾಡುವ ಕುರಿತು ಡಾ.ಕೆ.ಅನ್ನದಾನಿ ಅವರು ರೈಲ್ವೆ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಈ ಯೋಜನೆಯ ಬಗ್ಗೆ ಕುಮಾರಸ್ವಾಮಿಯವರು ರೇಲ್ವೆ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರಿಗೆ ಬಹಳಷ್ಟು ಅನುಕೂಲ ಆಗುವ ಈ ಯೋಜನೆಯನ್ನು ತುರ್ತಾಗಿ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ಅದರಂತೆ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ದೇವೇಗೌಡರಿಗೆ ಅಪಮಾನ ಆಗಿರೋ ಬಗ್ಗೆ ಸ್ವಾಮೀಜಿ ಯಾಕೆ ಮಾತಾಡಲಿಲ್ಲ?: ಹೆಚ್.ಡಿ ರೇವಣ್ಣ