ರಾಯಚೂರು: ಬಿಜೆಪಿ ಪಕ್ಷದಿಂದ ರಾಯಚೂರಿನಲ್ಲಿ ಇಂದು ಜನಾಶೀರ್ವಾದ ಯಾತ್ರೆ ನಡೆಯಲಿದೆ. ಕೇಂದ್ರ ಸಚಿವ ಭಗವಂತ್ ಖೂಬಾ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿದೆ. ಇನ್ನೂ ಕೇಂದ್ರ ಸಚಿವರ ಸ್ವಾಗತಕ್ಕಾಗಿ ಅದ್ಧೂರಿ ಸಿದ್ಧತೆಯಾಗಿದ್ದು, ನಗರದೆಲ್ಲೆಡೆ ಫ್ಲೆಕ್ಸ್ ಬ್ಯಾನರ್ ಗಳು ರಾರಾಜಿಸುತ್ತಿವೆ.
ಮಧ್ಯಾಹ್ನ 3 ಗಂಟೆಗೆ ರಾಯಚೂರು ತಾಲೂಕಿನ ದೇವಸುಗೂರು ಸೂಗುರೇಶ್ವರ ದೇವಾಲಯದಲ್ಲಿ ದರ್ಶನ ಪಡೆದು ಭಗವಂತ್ ಖೂಬಾ ನಗರಕ್ಕೆ ಆಗಮಿಸಲಿದ್ದಾರೆ. ನಿಯೋಜಿತಗೊಂಡ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಚಿವರಿಂದ ನಗರದ ಪ್ರಮುಖ ವೃತ್ತಗಳಲ್ಲಿನ ಪುತ್ಥಳಿಗಳಿಗೆ ಮಾಲಾರ್ಪಣೆ ನಡೆಯಲಿದೆ. ಇದನ್ನೂ ಓದಿ: ಇನ್ಫೋಸಿಸ್ ಫೌಂಡೇಶನ್‍ನಿಂದ ರಾಯರ ಮಠಕ್ಕೆ ಒಂದು ಲಾರಿ ಆಹಾರ ಪದಾರ್ಥ
Advertisement
Advertisement
ಬಿಜೆಪಿಯ ಆಯ್ದ ಕಾರ್ಯಕರ್ತರೊಂದಿಗೆ ಸಂಜೆ ಸಭೆ ನಡೆಯಲಿದೆ. ಕೋವಿಡ್ ಹಿನ್ನೆಲೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸಂಕ್ಷಿಪ್ತ ಸಭೆ ಏರ್ಪಡಿಸಲಾಗಿದೆ. ಸಭೆಯ ಮೂಲಕ ಪ್ರಧಾನಿ ಮೋದಿ ಅವರ ಯೋಜನೆಗಳನ್ನ ಮನೆ ಮನೆಗೆ ತಲುಪಿಸಲು ಬಿಜೆಪಿ ಮುಂದಾಗಿದೆ. ಇದನ್ನೂ ಓದಿ: 60 ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಮೋದಿ ಅವಧಿಯಲ್ಲಿ ನಡೆದಿದೆ: ರಾಜೀವ್ ಚಂದ್ರಶೇಖರ್