ಮುಂಬೈ: ಮಹಾರಾಷ್ಟ್ರದಲ್ಲಿ ಬ್ರಾಹ್ಮಣ ಸಮುದಾಯದವರು ಮುಖ್ಯಮಂತ್ರಿಯಾಗುವುದನ್ನು ನೋಡಲು ನಾನು ಬಯಸುತ್ತೇನೆ ಎಂದು ಕೇಂದ್ರ ರೈಲ್ವೆ, ಕಲ್ಲಿದ್ದಲು ಮತ್ತು ಗಣಿ ರಾಜ್ಯ ಸಚಿವ ರಾವ್‍ಸಾಹೇಬ್ ಪಾಟೀಲ್ ದಾನ್ವೆ ಹೇಳಿದ್ದಾರೆ.
ಮಂಗಳವಾರ ರಾತ್ರಿ ಜಾಲ್ನಾದಲ್ಲಿ ನಡೆದ ಪರಶುರಾಮ ಜಯಂತಿ ಆಚರಣೆಯಲ್ಲಿ ಬ್ರಾಹ್ಮಣ ಸಮುದಾಯದವರು ಆಯೋಜಿಸಿದ್ದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ನಾನು ಬ್ರಾಹ್ಮಣರನ್ನು ಕಾಪೊರೇಟರ್‌ಗಳಾಗಿ ಅಥವಾ ನಾಗರಿಕ ಸಂಸ್ಥೆಗಳ ಮುಖ್ಯಸ್ಥರನ್ನಾಗಿ ನೋಡಲು ಬಯಸುವುದಿಲ್ಲ. ಬ್ರಾಹ್ಮಣರನ್ನು ಈ ರಾಜ್ಯದ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತೇನೆ ಎಂದಿದ್ದಾರೆ.
Advertisement
Advertisement
ಈ ವರ್ಷದ ಆರಂಭದಲ್ಲಿ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದೆ. ರಾಜಕೀಯಕ್ಕೆ ಜಾತೀಯತೆ ಬಂದಿದ್ದು, ಅದನ್ನು ಕಡೆಗಣಿಸುವಂತಿಲ್ಲ. ಆದರೆ ಸಮುದಾಯಗಳನ್ನು ಒಗ್ಗೂಡಿಸುವ ನಾಯಕನಿರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗೆ ಪ್ರಪೋಸ್ ಮಾಡಿ ಮನಗೆದ್ದ ಹುಡುಗಿ – ನೆಟ್ಟಿಗರು ಫುಲ್ ಆಕ್ಟಿವ್
Advertisement
Advertisement
ರಾವ್‍ಸಾಹೇಬ್ ಪಾಟೀಲ್ ದಾನ್ವೆ ಅವರ ಈ ಹೇಳಿಕೆಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, ಜಾತಿ ಅಥವಾ ಲಿಂಗದ ಆಧಾರದ ಮೇಲೆ ಬೆಂಬಲಿಸಿದರೇ 145 ಶಾಸಕರು ಕೂಡ ಮುಖ್ಯಮಂತ್ರಿಯಾಗಬಹುದು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಆರ್ಭಟಕ್ಕೆ ಸೈಲೆಂಟಾದ ಕಿಂಗ್ಸ್ – ಚೆನ್ನೈ ವಿರುದ್ಧ 13 ರನ್‍ಗಳ ಜಯ