Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈಜಾಗ್ ಉಕ್ಕು ಕಾರ್ಖಾನೆ ಪುನಶ್ಚೇತನ ಉನ್ನತ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವೈಜಾಗ್ ಉಕ್ಕು ಕಾರ್ಖಾನೆ ಪುನಶ್ಚೇತನ ಉನ್ನತ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸಭೆ

Latest

ವೈಜಾಗ್ ಉಕ್ಕು ಕಾರ್ಖಾನೆ ಪುನಶ್ಚೇತನ ಉನ್ನತ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸಭೆ

Public TV
Last updated: July 3, 2024 6:42 pm
Public TV
Share
2 Min Read
h.d.kumaraswamy meeting
SHARE

ನವದೆಹಲಿ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ವೈಜಾಗ್ ಉಕ್ಕು ಕಾರ್ಖಾನೆಯ (Vizag Steel Factory) ಪ್ರಗತಿ ಪರಿಶೀಲನೆ ನಡೆಸಿದರು. ಉಕ್ಕು ಸಚಿವಾಲಯದ ವ್ಯಾಪ್ತಿಗೆ ಬರುವ ಈ ಕಾರ್ಖಾನೆಯನ್ನು ಲಾಭದಾಯಕವಾಗಿ ಮುನ್ನಡೆಸುವ ಹಾಗೂ ಆರ್ಥಿಕವಾಗಿ ಕಂಪನಿಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಉನ್ನತ ಅಧಿಕಾರಿಗಳು ಹಾಗೂ ಕಂಪನಿಯ ಉನ್ನತ ಅಧಿಕಾರಿಗಳ ಜತೆಗೆ ಸಚಿವರು ಮಹತ್ವದ ಸಭೆ ನಡೆಸಿದರು.

ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂಸ್ಥೆಯನ್ನು ಮೇಲೆತ್ತುವ ಸಲುವಾಗಿ ಉಕ್ಕು ಉತ್ಪಾದನೆಯನ್ನು ಹೆಚ್ಚಳ ಮಾಡಬೇಕೆಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಕಂಪನಿಯ ಕಾರ್ಯ ಚಟುವಟಿಕೆ, ಆರ್ಥಿಕ ಸ್ಥಿತಿಗತಿ, ಉತ್ಪಾದನೆ, ಹೊಸ ಉಪಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಸಿಬಿಐ ಬಂಧನ- ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ

ಉಕ್ಕು ಸಚಿವಾಲಯದ @SteelMinIndia ಅಧೀನದಲ್ಲಿರುವ ವೈಜಾಗ್ ಉಕ್ಕು ಕಾರ್ಖಾನೆಯ (Rashtriya Ispat Nigam Ltd-RNIL) ಪ್ರಗತಿ ಪರಿಶೀಲನೆ ನಡೆಸಲಾಯಿತು. ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ರಾಜ್ಯ ಸಚಿವರಾದ ಶ್ರೀ @BjpVarma ಅವರು, ಉಕ್ಕು ಸಚಿವಾಲಯ ಹಾಗೂ RNIL ಉನ್ನತ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು.

ಗೌರವಾನ್ವಿತ… pic.twitter.com/T9dCQbXeX8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 3, 2024

ಸಭೆಯಲ್ಲಿ ಹಾಜರಿದ್ದ ಕಂಪನಿಯ ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕರು ಹಾಗೂ ಆಡಳಿತ ಮಂಡಳಿಯ ನಿರ್ದೇಶಕರಿಂದ ಸಮಗ್ರ ಮಾಹಿತಿ ಪಡೆದುಕೊಂಡ ಸಚಿವರು, ಮೊದಲು ಉತ್ಪಾದನೆ ಹೆಚ್ಚಳ, ಕ್ಷಮತೆ ವೃದ್ಧಿಸಿಕೊಳ್ಳುವ ಕೆಲಸ ಮಾಡಿ. ನಂತರ ಆರ್ಥಿಕವಾಗಿ ಕಂಪನಿಗೆ ಹೇಗೆ ನೆರವಾಗಬೇಕು ಎನ್ನುವುದನ್ನು ಆಲೋಚನೆ ಮಾಡುತ್ತೇವೆ ಎಂದು ಹೇಳಿದರು.

ಅಲ್ಲದೆ, ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರಿ ನಿಗದಿ ಮಾಡಿದ್ದಾರೆ. ಈ ಗುರಿ ಮುಟ್ಟುವ ಬಗ್ಗೆ ನಾವು ಅವಿರತವಾಗಿ ಕೆಲಸ ಮಾಡಬೇಕು. ಅದಕ್ಕೆ ಪೂರಕವಾಗಿ ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಉತ್ಪಾದನೆ ಪ್ರಮಾಣವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಹತ್ರಾಸ್‌ ದುರಂತ- ಪರಿಹಾರದ ಮೊತ್ತ ಹೆಚ್ಚಿಸಿದ ಸಿಎಂ ಯೋಗಿ ಆದಿತ್ಯನಾಥ್‌

ಉಕ್ಕು ಕ್ಷೇತ್ರದಲ್ಲಿ ಚೀನಾ ಒಡ್ಡುತ್ತಿರುವ ಪೈಪೋಟಿಯನ್ನು ಅಧಿಕಾರಿಗಳ ಸಭೆಯಲ್ಲಿ ಪ್ರಸ್ತಾಪ ಮಾಡಿದ ಸಚಿವರು, ದೇಶೀಯವಾಗಿ ಉಕ್ಕು ಕ್ಷೇತ್ರವನ್ನು ಬಲಪಡಿಸಬೇಕು. ಸ್ಪೆಶಾಲಿಟಿ ಸ್ಟೀಲ್ ಮತ್ತು ಗ್ರೀನ್ ಸ್ಟೀಲ್ ಉತ್ಪಾದನೆಗೆ ನಾವು ಹೆಚ್ಚು ಒತ್ತು ಕೊಡಬೇಕಿದೆ. ತಾಂತ್ರಿಕ ಮತ್ತು ಆರ್ಥಿಕ ಶಕ್ತಿಯನ್ನು ಹೆಚ್ಚಿಸಿಕೊಂಡು ಸವಾಲುಗಳನ್ನು ಎದುರಿಸಬೇಕಿದೆ. ಕಾರ್ಖಾನೆ ಪುನಶ್ಚೇತನಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸಿ ಎಂದರು.

ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀನಿವಾಸ್ ಭೂಪತಿರಾಜು ವರ್ಮ, ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ ಸಿನ್ಹಾ, ಹೆಚ್ಚುವರಿ ಕಾರ್ಯದರ್ಶಿ ಸುಕೃತಿ ಲಿಖಿ, ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೇಂದು ಪ್ರಕಾಶ್, ವಿಶಾಖಪಟ್ಟಣ ಉಕ್ಕು ಕಾರ್ಖಾನೆಯ ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕ ಅತುಲ್ ಭಟ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಕೆಲವರು ಸಂವಿಧಾನದ ಪುಸ್ತಕ ಹಿಡಿದು ತಿರುಗುತ್ತಾರೆ: ಮೋದಿ ಟಾಂಗ್

ಮನವಿ ಸಲ್ಲಿಸಿದ್ದ ಆಂಧ್ರ ಸಂಸದರು
ಕೆಲ ದಿನಗಳ ಹಿಂದೆ ಕೇಂದ್ರ ಸಚಿವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದ್ದ ಆಂಧ್ರ ಪ್ರದೇಶದ ಸಂಸದರಾದ ಪುರಂದೇಶ್ವರಿ ಅವರ ನೇತೃತ್ವದ ನಿಯೋಗವು, ವಿಶಾಖಪಟ್ಟಣ ಉಕ್ಕು ಕಾರ್ಖಾನೆಯ ಪುನಶ್ಚೇತನದ ಬಗ್ಗೆ ಮನವಿ ಸಲ್ಲಿಸಿದ್ದರು.

TAGGED:h d kumaraswamyVizag Steel Factoryವೈಜಾಗ್‌ ಉಕ್ಕು ಕಾರ್ಖಾನೆಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
2 minutes ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
57 minutes ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
1 hour ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
1 hour ago
Karnataka Congress MLAs ‘foreign study tour Here is the list of MLAs going abroad
Bengaluru City

ಕುರ್ಚಿ ಕದನ ಹೊತ್ತಲ್ಲೇ ಟೂರ್ ಪಾಲಿಟಿಕ್ಸ್ – ವಿದೇಶಕ್ಕೆ ಯಾರ್‍ಯಾರು ಹೋಗ್ತಿದ್ದಾರೆ?

Public TV
By Public TV
2 hours ago
PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?