– ಬಸವರಾಜ ಹೊರಟ್ಟಿ ನನ್ನ ಕುಮಾರ ಎಂದಾಗ ಜಮೀರ್ ಹೊಡೆಯೋಕೆ ಹೋಗಿದ್ರು
– ಕರಿಯಾ, ಕುಳ್ಳ ಎಂದು ಮಾತಾಡಿಸಿಕೊಳ್ಳುವ ಸಂಸ್ಕೃತಿಯಿಂದ ಬಂದವ ನಾನಲ್ಲ
ಮೈಸೂರು: ನಾನು ಯಾವತ್ತೂ ಜಮೀರ್ (Zameer Ahmed) ಅವರನ್ನು ಕುಳ್ಳ ಎಂದು ಕರೆದಿಲ್ಲ. ನಮ್ಮ ಸ್ನೇಹ ಇದ್ದದ್ದು ರಾಜಕೀಯವಾಗಿ ಅಷ್ಟೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಸ್ಪಷ್ಟಪಡಿಸಿದರು.
Advertisement
ಮೈಸೂರಿನ (Mysuru) ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ತಾಯಿ ಮುಂದೆ ನಿಂತು ಹೇಳ್ತಿದ್ದೇನೆ ಕೇಳಿ. ಬಸವರಾಜ್ ಹೊರಟ್ಟಿ ಅವತ್ತು ನನ್ನ ಕುಮಾರ ಎಂದಾಗ ಅವರನ್ನು ಹೊಡೆಯಲು ಹೋದ ಗಿರಾಕಿ ಇವರು. ಹೊರಟ್ಟಿ ಅವರು ಈಗಲೂ ಇದ್ದಾರೆ ಅವರನ್ನೇ ಕೇಳಿ ಬೇಕಾದರೆ. ಅವತ್ತು ಅವರನ್ನು ಹೊಡೆಯಲು ಇವರು ಹೋಗಿರಲಿಲ್ವಾ ಅಂತಾ ಎಂದು ಜಮೀರ್ ವಿರುದ್ಧ ಸ್ಪೋಟಕ ಹೇಳಿಕೆ ನೀಡಿದರು. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ | ಜಮೀರ್ ವಿರುದ್ಧ ತಿರುಗಿಬಿದ್ದ ಕೈ ಕಾರ್ಯಕತರು
Advertisement
Advertisement
ಕರಿಯಾ, ಕುಳ್ಳ ಎಂದು ಮಾತಾಡಿಸಿ ಕೊಳ್ಳುವ ಸಂಸ್ಕೃತಿಯಿಂದ ಬಂದವ ನಾನಲ್ಲ. ಅವರ ಮಾತುಗಳು ಅವರ ಸಂಸ್ಕೃತಿ ತೋರಿಸುತ್ತದೆ. ಸಿಎಂ ಹಾಗೂ ಡಿಸಿಎಂ ಈ ಮಾತುಗಳನ್ನ ಸಮರ್ಥಿಸಿಕೊಂಡಿದ್ದಾರೆ. ಇದು ನಾಗರಿಕ ಸರ್ಕಾರನಾ? ಇಂಥ ಮಾತು ಹೇಳಿದವರು ಮೇಲೆ ಎಷ್ಟು ಕೇಸ್ ಹಾಕಿ ಜೈಲಿಗೆ ಹಾಕಿಲ್ಲ ಈ ಸರ್ಕಾರ? ಈಗ ಯಾಕೆ ಸುಮ್ಮನೆ ಇದೆ? ಸಿಎಂಗೆ ದೇವೇಗೌಡರು ಗರ್ವಭಂಗ ಮಾಡ್ತೀನಿ, ಸೊಕ್ಕು ಮುರಿತೀನಿ ಅನ್ನೋದು ಮಾನನಷ್ಟ ಹೇಳಿಕೆನಾ? ನಾನು ಯಾವತ್ತೂ ಅವರನ್ನು ಕುಳ್ಳ ಎಂದು ಕರೆದಿಲ್ಲ. ನಮ್ಮ ಸ್ನೇಹ ಇದ್ದದ್ದು ರಾಜಕೀಯವಾಗಿ ಅಷ್ಟೆ. ದುಡ್ಡಿನ ಮದದಿಂದ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.
Advertisement
ಸರ್ಕಾರ ಬೀಳಿಸಲು 50 ಕೋಟಿ ಆಫರ್ ವಿಚಾರವಾಗಿ ಮಾತನಾಡಿ, ಸಿಎಂ ಹೇಳಿಕೆ ಬಫೂನ್ ರೀತಿ ಇದೆ. 50 ಕೋಟಿ 50 ಜನರಿಗೆ ಅಂಥ ನಿಖರವಾಗಿ ಹೇಳುತ್ತಿದ್ದಾರೆ. ಈ ಸರ್ಕಾರ ಪ್ರತಿಯೊಂದಕ್ಕೂ ಎಸ್‌ಐಟಿ ತನಿಖೆ ಮಾಡಿಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಕರ್ನಾಟಕದಲ್ಲಿ 6 ಲಕ್ಷ ಎಕರೆಯನ್ನು ವಕ್ಫ್ ಆಸ್ತಿ ಮಾಡಲು ಮುಂದಾಗಿದ್ದಾರೆ: ಯತ್ನಾಳ್ ಆರೋಪ
ಚನ್ನಪಟ್ಟಣದಲ್ಲಿ ಜನತೆಯ ಆಶೀರ್ವಾದ ಆಗಿದೆ. ಉತ್ತಮವಾದ ರೀತಿಯಲ್ಲಿ ಗೆಲ್ಲುತ್ತೇವೆ. ರಾಜಕೀಯ ಏನ್ ನಡೆದಿದೆ ಎಂಬುದನ್ನ ಯೋಗೇಶ್ವರ್ ವಿಮರ್ಶೆ ಮಾಡಿದ್ದಾರೆ. ಜಮೀರ್ ಹೇಳಿಕೆಯಿಂದ ಏನು ವ್ಯತ್ಯಾಸ ಆಗಿಲ್ಲ. ನಾವು ಚನ್ನಪಟ್ಟಣದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.