Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವದಾರಿ ಗಣಿ ಯೋಜನೆ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಸಂಚು: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇವದಾರಿ ಗಣಿ ಯೋಜನೆ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಸಂಚು: ಹೆಚ್‌ಡಿಕೆ

Latest

ದೇವದಾರಿ ಗಣಿ ಯೋಜನೆ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಸಂಚು: ಹೆಚ್‌ಡಿಕೆ

Public TV
Last updated: June 28, 2024 6:47 pm
Public TV
Share
3 Min Read
HD Kumaraswamy 7
SHARE

ನವದೆಹಲಿ: ದೇವದಾರಿ ಗಣಿ (Devadari Mining) ಯೋಜನೆ ಬಗ್ಗೆ ಜನರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಟ್ಟ ಅಭಿಪ್ರಾಯ ಉಂಟು ಮಾಡಲು ಸಂಚು ಮಾಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumraswamy) ಕಟುವಾಗಿ ಟೀಕಿಸಿದರು.

ನವದೆಹಲಿಯಲ್ಲಿ ರಾಜ್ಯದ ಸಂಸದರ ಸಭೆಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕೇಂದ್ರ ಸಚಿವರು, ರಾಜ್ಯಕ್ಕೆ 2,800 ಕೋಟಿ ರೂ.ಗೂ ಹೆಚ್ಚು ಆದಾಯ ತಂದುಕೊಡುವ ಹಾಗೂ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಈ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದೇವದಾರಿ ಗಣಿಗಾರಿಕೆಗೆ ನಾನು ಹೊಸದಾಗಿ ಒಪ್ಪಿಗೆ ನೀಡಿಲ್ಲ. ರಾಜ್ಯ ಸರ್ಕಾರವೇ ಇದಕ್ಕೆ ಅನುಮತಿ ಕೊಟ್ಟಿದೆ. ಹಣಕಾಸು ನೆರವು ಪಡೆಯುವ ವಿಚಾರದಲ್ಲಿ ಯೋಜನೆಯ ಕಡತವನ್ನು ಆರ್ಥಿಕ ಇಲಾಖೆಗೆ ಕಳಿಸಬೇಕಿತ್ತು. ಅದನ್ನು ನಾನು ಮಾಡಿದ್ದೇನೆ. ಕುದುರೆಮುಖ (Kudremukh) ಪ್ರದೇಶದಲ್ಲಿ ಕೆಐಒಸಿಎಲ್ (KIOCL) ನಿಯಮಗಳನ್ನು ಉಲ್ಲಂಘನೆ ಮಾಡಿದ್ದರೆ ಕ್ರಮ ಜರುಗಿಸಬಹುದು ಹಾಗೂ ದಂಡವನ್ನು ಹಾಕಬಹುದು. ಅದನ್ನು ಬಿಟ್ಟು ಸರಕಾರಿ ಸ್ವಾಮ್ಯದ ಕಂಪನಿಯೊಂದರ ಯೋಜನೆಗೆ ಅಡ್ಡಗಾಲು ಹಾಕಿದರೆ ಅದು ಮತ್ತಷ್ಟು ನಷ್ಟಕ್ಕೆ ತುತ್ತಾಗುತ್ತದೆ ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದರು.

Devadari mining Sanduru

ದೆಹಲಿಯಲ್ಲಿ ಸಂಸದರ ಸಭೆ ಕರೆಯಲಾಗಿತ್ತು. ನಾನು ಕೂಡ ಹಾಜರಾಗಿದ್ದೆ. ಕೇಂದ್ರದಿಂದ ಬಾಕಿ ಇರುವ 26 ಪ್ರಸ್ತಾವನೆಗಳನ್ನು ರಾಜ್ಯ ಸರಕಾರ ನಮಗೆ ಕೊಟ್ಟಿದೆ. ನೀರಾವರಿ, ತೆರಿಗೆ ಪಾಲು, ಅನುದಾನಗಳ ಬಗ್ಗೆ ಮುಖ್ಯಮಂತ್ರಿಗಳು ಪ್ರಸ್ತಾವನೆ ಮಾಡಿದ್ದಾರೆ. ಏಮ್ಸ್, ಐಐಟಿಗಳ ಪ್ರಸ್ತಾವನೆಯನ್ನು ಕೊಟ್ಟಿದ್ದಾರೆ. ರಾಜ್ಯ ಸರಕಾರದಲ್ಲಿರುವ ಮಾಹಿತಿ ಕೊರತೆ ಬಗ್ಗೆ ಮಾತನಾಡಿದ್ದೇವೆ. ಸರಿಯಾದ ಮಾಹಿತಿಯೊಂದಿಗೆ ಬಂದರೆ ನೆರವು ಕೊಡುತ್ತೇವೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಚಿವರು ಮಾಹಿತಿ ನೀಡಿದರು.

15ನೇ ಹಣಕಾಸಿನ ಆಯೋಗದಲ್ಲಿ ಹಣದ ಕಡಿತದಲ್ಲಿ ಆಗಿರುವ ಬಗ್ಗೆ ಚರ್ಚೆಯಾಗಿದೆ. 16ನೇ ಹಣಕಾಸು ಆಯೋಗದಲ್ಲಿ ಸಮಸ್ಯೆ ಆಗಬಾರದು. ರಾಜ್ಯ ಸರಕಾರ ಆಯೋಗದ ಮುಂದೆ ಅಭಿಪ್ರಾಯ ಮಂಡಿಸಿ ಸರಿಪಡಿಸಬೇಕು. ಪದೇ ಪದೇ ಕೇಂದ್ರದ ವಿರುದ್ಧ ಹೇಳಿಕೆ ಕೊಡಬಾರದು ಎಂದರು ಸಚಿವರು.

KIOCL 1

ಹೇಳಿಕೆ ತಪ್ಪು:
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ (Niramla Sitharaman) ಅವರ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರ ಹೇಳಿಕೆ ತಪ್ಪು. ಕೇಂದ್ರ ಸಚಿವರು, ಅದರಲ್ಲಿಯೂ ಮಹಿಳೆಯರ ಬಗ್ಗೆ ಅಂತಹ ಪದ ಬಳಕೆ ಸರಿಯಲ್ಲ. ಇದು ಸಚಿವರ ಸಂಕುಚಿತ ಮನೋಭಾವ ತೋರಿಸುತ್ತದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಕೇಂದ್ರದ ಬಳಿ ಅನುದಾನ ಪಡೆಯಬೇಕಾದರೆ ಅಂಕಿ ಅಂಶಗಳ ಸಮೇತ ಕರಾರುವಾಕ್ಕಾಗಿ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಬೇಕು. ಗೊಂದಲ ಇಲ್ಲದಂತೆ ಸರಿಯಾದ ಮಾಹಿತಿ ಸಲ್ಲಿಸಬೇಕು. ಅದನ್ನು ಹೊರತುಪಡಿಸಿ ಅಸಂದೀಯ ಪದ ಬಳಕೆ ಮಾಡಿ ಟೀಕೆ ಮಾಡಿದರೆ ಉಪಯೋಗ ಏನು ಎಂದು ಹೆಚ್‌ಡಿಕೆ ಪ್ರಶ್ನಿಸಿದರು.


ಇವರಿಗೆ ರಾಜ್ಯದ ಅಭಿವೃದ್ದಿ ಬೇಕಿಲ್ಲ, ಕೇಂದ್ರದೊಂದಿಗೆ ಸಂಘರ್ಷ ಬೇಕು. ಅವರು ತಮ್ಮ ಕೊರತೆಯನ್ನು ಮೊದಲು ಸರಿ ಮಾಡಿಕೊಳ್ಳಬೇಕು. ಆಗ ನಾವೇ ನಿಮ್ಮನ್ನು ಕರೆದುಕೊಂಡು ಹೋಗಿ ಕೆಲಸ ಮಾಡಿಸಿ ಕೊಡುತ್ತೇವೆ. ಒಳ್ಳೆಯ ಬಾಂಧವ್ಯ ಇಟ್ಟುಕೊಂಡು ಕೇಂದ್ರ ಜತೆ ಕೆಲಸ ಮಾಡದಿದ್ದರೆ ನಾವೇನು ಮಾಡಲು ಸಾಧ್ಯ ಎಂದು ಕೇಂದ್ರ ಸಚಿವರು ಖಾರವಾಗಿ ಪ್ರಶ್ನಿಸಿದರು.

ಕಾಂಗ್ರೆಸ್‌ ವಿಚಾರ ಮಾತನಾಡಲ್ಲ:
ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ನಾಥ ಸ್ವಾಮೀಜಿ ಅವರು ಸಿಎಂ ಹುದ್ದೆಯ ವಿಷಯದ ಬಗ್ಗೆ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಯಾರನ್ನು ಸಿಎಂ ಮಾಡಬೇಕು ಎನ್ನುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಅವರ ಪಕ್ಷದ 136 ಶಾಸಕರು, ಅವರ ಹೈಕಮಾಂಡ್ ನಿರ್ಧಾರ ಮಾಡುತ್ತಾರೆ. ಈ ಬಗ್ಗೆ ನಾನು ಏನು ಹೇಳಲು ಸಾಧ್ಯ ಎಂದರು.

 

TAGGED:congressDevadari Mininghd kumaraswamykarnatakaಕರ್ನಾಟಕಕಾಂಗ್ರೆಸ್ದೇವದಾರಿ ಗಣಿಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
6 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
7 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
7 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
8 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
8 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?