ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಮೂಗಿನಿಂದ ದಿಢೀರ್ ರಕ್ತಸ್ರಾವ ಉಂಟಾಗಿದೆ. ಇದರಿಂದ ಆತಂಕಗೊಂಡ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ (Hospital) ಕರೆದೊಯ್ದಿದ್ದಾರೆ.
Advertisement
ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ (Karnataka Govt) ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್ (Private Hotel) ಒಂದರಲ್ಲಿ ಬಿಜೆಪಿ-ಜೆಡಿಎಸ್ ನಾಯಕರು (BJP JDS Leader) ಜಂಟಿಯಾಗಿ ಸಭೆ ನಡೆಸಿದ್ದರು. ಸಭೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು. ಸಭೆಯನ್ನುದ್ದೇಶಿಸಿ ಹೆಚ್‌ಡಿಕೆ ಮಾತನಾಡುತ್ತಿದ್ದಂತೆ ದಿಢೀರ್ ಅಂತ ಮೂಗಿನಿಂದ ರಕ್ತಸ್ರಾವ ಉಂಟಾಯಿತು. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್
Advertisement
ರಕ್ತಸ್ರಾವದ ಪ್ರಮಾಣ ಇದ್ದಕ್ಕಿದ್ದಂತೆ ಹೆಚ್ಚಾಗತೊಡಗಿತು. ಇದರಿಂದ ಆತಂಕಗೊಂಡ ಕಾರ್ಯಕರ್ತರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಮೂಗಿಗೆ ಕರ್ಚೀಫ್ ಹಿಡಿದುಕೊಂಡೇ ಕಾರಿನಲ್ಲಿ ಹೆಚ್‌ಡಿಕೆ ಜಯನಗರ ಅಪೋಲೋ ಆಸ್ಪತ್ರೆಗೆ ಹೊರಟರು. ಕಾರು ತೆರಳುವಷ್ಟರಲ್ಲಿ ಬಟ್ಟೆಯೆಲ್ಲಾ ರಕ್ತದ ಕಲೆಯಾಗಿತ್ತು. ಇದನ್ನೂ ಓದಿ: ವಾಲ್ಮೀಕಿ ನಿಗಮ ಅಕ್ರಮದಲ್ಲಿ ಬ್ಯಾಂಕ್ ಅಧಿಕಾರಿಗಳ ತಪ್ಪು ಸಾಬೀತಾದ್ರೆ ಕ್ರಮ ಖಚಿತ: ನಿರ್ಮಲಾ ಸೀತಾರಾಮನ್