ತಿರುಪತಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ (Tirupati Temple) ತೆರಳಿ ದೇವರ ದರ್ಶನ ಮಾಡಿದ್ದಾರೆ.
ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸುಪ್ರಭಾತ ಸೇವೆಗಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
VIDEO | Union Minister HD Kumaraswamy (@hd_kumaraswamy) offered prayers at Venkateswara Swami Temple, Tirumala, Tirupati, Andhra Pradesh, earlier today.
“In this Parliament, PM Modi has given me big departments. I want Lord Venkateswara’s blessings to succeed in my work as a… pic.twitter.com/tgGZgKNGdg
— Press Trust of India (@PTI_News) June 15, 2024
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಸಚಿವನಾಗಿ ನನ್ನ ಕೆಲಸ ಯಶಸ್ವಿಯಾಗಲು ವೆಂಕಟೇಶ್ವರನ ಆಶೀರ್ವಾದ ಪಡೆಯಲು ನಾನು ಬಂದಿದ್ದೇನೆ ಎಂದು ಹೇಳಿದರು.
ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಶುಕ್ರವಾರ ಕುಮಾರಸ್ವಾಮಿ ಬೆಂಗಳೂರಿಗೆ ಶುಕ್ರವಾರ ಆಗಮಿಸಿದರು. ತಿರುಪತಿಯಿಂದ ಇಂದು ಮರಳಿದ ಬಳಿಕ ಸ್ಪೀಕರ್ ಕಚೇರಿಗೆ ತೆರಳಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ.