ಚಿಕ್ಕಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ (Kempegowda International Airport) ಮಾತನಾಡುತ್ತಾ, ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿದ್ದಾರೆ. ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ, ರಾಜ್ಯದ ಸಮಸ್ಯೆಗಳಿಗೆ ಸಂಬಂಧಪಟ್ಟ ವಿಚಾರಗಳನ್ನು ಮಾತ್ರ ಚರ್ಚೆ ಮಾಡಿ. ಅದರ ಅವಶ್ಯಕತೆ ಏನಿದೆ? ಕಾನೂನು ಇದೆ ಕಾನೂನಿನ ಅಡಿ ಎಲ್ಲವೂ ನಡೆಯಲಿದೆ. ಯಾಕೆ ಪ್ರಕರಣ ಬರ್ತಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ನನ್ನ ಬಳಿ ಆ ತರಹದ ಪ್ರಶ್ನೆಗಳನ್ನ ಕೇಳಬೇಡಿ ಎಂದು ಹೇಳಿದ್ದಾರೆ.
Advertisement
Advertisement
ಏನಿದು ಪ್ರಕರಣ?
ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಆರೋಪ ಮಾಡಿದ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿ, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ (Shivakumar) ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ.
Advertisement
5 ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ ಸೆಕ್ಷನ್ 384, 506 ರ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
Advertisement
ಡಿಕೆಶಿ ಜೊತೆಗೆ ಯಾರಾದ್ರೂ ನಿಲ್ಲಲ್ಲಿ:
ಇದೇ ವೇಳೆ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಡಿಕೆಶಿ ಸ್ಪರ್ಧೆ ವಿಚಾರ ಕುರಿತು ಮಾತನಾಡಿದ ಹೆಚ್‌ಡಿಕೆ, ಚನ್ನಪಟ್ಟಣದಲ್ಲಿ ಯಾರು ಬೇಕಾದರೂ ನಿಲ್ಲಲಿ. ಡಿಕೆ ಶಿವಕುಮಾರ್ ಆದ್ರೂ ನಿಲ್ಲಲಿ, ಅಥವಾ ಅವರ ಜೊತೆಗೆ ಇನ್ನೂ 4 ಜನನ್ನ ಕರ್ಕೊಂಡು ಬಂದು ನಿಲ್ಲಿಸಿಕೊಳ್ಳಲಿ. ನಿಲ್ಲಬಾರದು ಅಂತ ಹೇಳಲು ಆಗುತ್ತಾ? ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ನಿಲ್ಲಬಹುದು. ಅದಕ್ಕೆ ದೊಡ್ಡ ಮಹತ್ವ ಕೊಡೋದು ಬೇಡ. ನಮ್ಮ ಕ್ಯಾಂಡಿಡೇಟ್ ಬಗ್ಗೆ ಕಾಲವೇ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.