ಪಾಟ್ನ: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿಯವರ (Jitan Ram Manjhi) ಮೊಮ್ಮಗಳನ್ನು ಅವರ ಪತಿಯೇ ಗುಂಡಿಕ್ಕಿ ಹತ್ಯೆಗೈದ ಘಟನೆ ಬಿಹಾರದ (Bihar) ಗಯಾದಲ್ಲಿ ನಡೆದಿದೆ.
ಹತ್ಯೆಗೀಡಾದ ಮಹಿಳೆಯನ್ನು ಸುಷ್ಮಾ ದೇವಿ ಎಂದು ಗುರುತಿಸಲಾಗಿದೆ. ಹತ್ಯೆಗೀಡಾದ ಮಹಿಳೆಯ ಪತಿ ರಮೇಶ್ ಇಂದು (ಏ.9) ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೆಲಸದಿಂದ ಮನೆಗೆ ಹಿಂದಿರುಗಿದ್ದರು. ಈ ವೇಳೆ ಅವರ ನಡುವೆ ಜಗಳ ಪ್ರಾರಂಭವಾಗಿದೆ. ಜಗಳದ ಸಮಯದಲ್ಲಿ ರಮೇಶ್ ಕಂಟ್ರಿ ಪಿಸ್ತೂಲ್ ತೆಗೆದುಕೊಂಡು ಪೂನಂ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ಆಕೆ ಸ್ಥಳದ್ಲಲೇ ಸಾವಿಗೀಡಾಗಿದ್ದು, ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಸುಷ್ಮಾಳ ಸಹೋದರಿ ಪೂನಂ ಕುಮಾರಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಯಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಆನಂದ್ ಕುಮಾರ್, ಆರೋಪಿಯನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಅಪರಾಧ ನಡೆದ ಸ್ಥಳದಲ್ಲಿ ವಿಧಿವಿಜ್ಞಾನ ತಂಡ ಮತ್ತು ತಾಂತ್ರಿಕ ತಜ್ಞರು ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‍ಐಆರ್
ಗಯಾ ಲೋಕಸಭಾ ಕ್ಷೇತ್ರದ ಸಂಸದರು ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವರಾಗಿರುವ ಮಾಂಝಿಯವರು ಘಟನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮಾಂಝಿಯವರು ಬಿಹಾರದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಮಿತ್ರಪಕ್ಷವಾದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಸ್ಥಾಪಕರಾಗಿದ್ದಾರೆ.
ಸುಷ್ಮಾ ಮತ್ತು ರಮೇಶ್ ಬೇರೆ ಬೇರೆ ಜಾತಿಗಳಿಗೆ ಸೇರಿದ್ದು, 14 ವರ್ಷಗಳ ಹಿಂದೆ ವಿವಾಹವಾಗಿದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ವೃತ್ತಿ ಜೀವನದ ಕೊನೆಯ ದಿನ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಮುಖ್ಯಸ್ಥ!