2027ಕ್ಕೆ ಚಂದ್ರಯಾನ-4, 2026ಕ್ಕೆ ಗಗನಯಾನ: ಜಿತೇಂದ್ರ ಸಿಂಗ್‌

Public TV
1 Min Read
chandrayaan 3 south pole

ನವದೆಹಲಿ: ಚಂದ್ರನ ಮೇಲ್ಮೈನಲ್ಲಿನ ಕಲ್ಲುಗಳನ್ನು ಭೂಮಿಗೆ ಹೊತ್ತು ತರುವ ಚಂದ್ರಯಾನ-4 ಮಿಷನ್‌ (Chandrayaan-4 Space Missions) ಅನ್ನು 2027ರ ವೇಳೆ ಜಾರಿಮಾಡಲಾಗುವುದು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್‌ (Jitendra Singh) ಹೇಳಿದ್ದಾರೆ.

ಕಲ್ಲುಗಳ ಮಾದರಿಗಳನ್ನು ಹೊರುವ ಶಕ್ತಿ ಹೊಂದಿರುವ ಎರಡು ಪ್ರತ್ಯೇಕ ರಾಕೆಟ್‌ಗಳನ್ನು ಉಡ್ಡಯನ ಮಾಡಲಾಗುವುದು. ಈ ರಾಕೆಟ್‌ಗಳಲ್ಲಿ ಐದು ವಿವಿಧ ಕಾಂಪೋನೆಂಟ್‌ಗಳು ಇರಲಿವೆ. ಇವುಗಳನ್ನು ಕ್ಷಕೆಯಲ್ಲಿ ಜೋಡಿಸಲಾಗುವುದು ಎಂದಿದ್ದಾರೆ.

Jitendra Singh

ಅಲ್ಲದೇ ಮುಂದಿನ ವರ್ಷ ಮಾನವರವನ್ನು ಬಾಹ್ಯಾಕಾಶಕ್ಕೆ ಕಳುಹಿಸಿ, ಸುರಕ್ಷಿತವಾಗಿ ವಾಪಸ್‌ ಕರೆಸಿಕೊಳ್ಳುವ ʻಗಗನಯಾನʼ ಮಿಷನ್‌ ಅನ್ನು ಕೂಡ ಜಾರಿ ಮಾಡಲಾಗುವುದು. 2026ರಲ್ಲಿ ʻಸಮುದ್ರಯಾನʼ ಮಿಷನ್‌ ಅನ್ನೂ ಜಾರಿ ಮಾಡಲಿದ್ದೇವೆ. ಸಮುದ್ರದ 6,000 ಮೀಟರ್‌ನಷ್ಟು ಆಳಕ್ಕೆ ಮೂವರು ವಿಜ್ಞಾನಿಗಳು ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ʻರೊಬೊಟ್ ವ್ಯೂಮಿತ್ರಾʼವನ್ನು ಗಗನಯಾನಕ್ಕೆ ಕಳುಹಿಸುವ ಮಹತ್ವದ ಕಾರ್ಯ ಇದೇ ವರ್ಷ ನಡೆಯಲಿದೆ. 1969ರಲ್ಲಿ ಇಸ್ರೋ ಸ್ಥಾಪನೆಯಾದರೂ ಇದರ ಮೊದಲ ಉಡ್ಡಯನ ಕೇಂದ್ರವು 1993ರಲ್ಲಿ ಸ್ಥಾಪನೆಯಾಯಿತು. ಇಸ್ರೋ ಸ್ಥಾಪನೆಯಿಂದ 2014ರ ವರೆಗೆ ಭಾರತೀಯ ಬಾಹ್ಯಾಕಾಶ ಕ್ಷೇತ್ರವು ಅಭಿವೃದ್ಧಿ ಹೊಂದಿದ್ದಕ್ಕಿಂತ ಹೆಚ್ಚಿನ ಅಭಿವೃದ್ಧಿಯು ಕಳೆದ 10 ವರ್ಷಗಳಲ್ಲಾಗಿದೆ ಎಂದರು.

Share This Article