ನವದೆಹಲಿ: ಲೈಂಗಿಕ ಕಿರುಕುಳದ ಆರೋಪಕ್ಕೆ ಒಳಗಾಗಿದ್ದ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆಯ ಸಚಿವ ಎಂ.ಜೆ.ಅಕ್ಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನ್ಯಾಯಾಲಯದ ಮೇಲೆ ನಾನು ನಂಬಿಕೆ ಇಟ್ಟಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದವರ ವಿರುದ್ಧ ನಾನು ಹೋರಾಟ ಮಾಡುತ್ತೇನೆ. ನನ್ನ ಕಾರ್ಯಕ್ಷಮತೆಯನ್ನು ನಂಬಿ ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ಸ್ಥಾನ ಹೊಣೆ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸುಷ್ಮ ಸ್ವರಾಜ್ ಅವರಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
Advertisement
ಭಾನುವಾರ ನೈಜೀರಿಯಾದಿಂದ ವಾಪಾಸ್ಸಾದ ಅವರು ಅಕ್ಬರ್, ತಮ್ಮ ವಕೀಲ ಕರಣ್ ಜವಾಲ್ ರ ಮೂಲಕ ಪತ್ರಕರ್ತೆ ಪ್ರಿಯಾ ರಮಣಿ ಸೇರಿದಂತೆ ಒಟ್ಟು 11 ಜನರ ಮೇಲೆ ಪಟಿಯಾಲಾ ಹೌಸ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
Advertisement
ಘಟನೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಇದಕ್ಕೆ ತಕ್ಕ ಉತ್ತರವನ್ನೇ ಹೇಳುತ್ತೇನೆ ಎಂದು ಹೇಳಿದ್ದರು. ಪತ್ರಕರ್ತೆ ಪ್ರಿಯಾ ರಮಣಿ ಮೇಲೆ ಐಪಿಸಿ ಸೆಕ್ಷನ್ 499(ಮಾನಹಾನಿ) ಹಾಗೂ 500 (ಮಾನಹಾನಿ ದಂಡನೆ)ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.
Advertisement
— M.J. Akbar (@mjakbar) October 14, 2018
Advertisement
ಏನಿದು ಪ್ರಕರಣ?:
ಸಚಿವ ಅಕ್ಬರ್ ವಿರುದ್ಧ ಪತ್ರಕರ್ತೆ ಪ್ರಿಯಾ ರಮಣಿ ಅವರು ಮೊದಲು ಆರೋಪ ಮಾಡಿದ್ದರು. ಎಂಜಿ ಅಕ್ಬರ್ ಕತೆಯೊಂದಿಗೆ ಇದನ್ನು ಆರಂಭಿಸುತ್ತೇನೆ. ಆದರೆ ಅವರ ಹೆಸರನ್ನು ಉಲ್ಲೇಖಿಸಿಲ್ಲ, ಏಕೆಂದರೆ ಅವರೇನೂ ಮಾಡಿಲ್ಲ. ಈ ಬೇಟೆಗಾರನಿಂದ ಅನೇಕ ಮಹಿಳೆಯರಿಗೆ ಕೆಟ್ಟ ಅನುಭವ ಆಗಿರಬಹುದು. ಬಹುಶಃ ಅವರು ಅನುಭವ ಹಂಚಿಕೊಳ್ಳಬಹುದು ಎಂದು ಬರೆದು ಅಕ್ಟೋಬರ್ 8ರಂದು ಟ್ವೀಟ್ ಮಾಡಿದ್ದರು.
ಅಷ್ಟೇ ಅಲ್ಲದೆ ತಮ್ಮ ಮೇಲಾದ ಲೈಂಗಿಕ ಕಿರುಕುಳ ಕುರಿತು 2017ರ ಅಕ್ಟೋಬರ್ ನಲ್ಲಿ ಲೇಖನವೊಂದನ್ನು ಪ್ರಿಯಾ ರಮಣಿ ಬರೆದಿದ್ದರು. ಪ್ರಿಯಾ ರಮಣಿ ಆರೋಪದ ಬೆನ್ನಲ್ಲೇ ಪ್ರೇರಣಾ ಸಿಂಗ್ ಬಿಂದ್ರಾ, ಘಜಾಲಾ ವಹಾಬ್, ಶುತಾಪಾ ಪಾಲ್, ಅಂಜು ಭಾರ್ತಿ, ಸುಪರ್ಣಾ ಶರ್ಮಾ, ಶುಮಾ ರಾಹಾ, ಮಾಲಿನಿ ಭೂಪ್ತಾ, ಕನಿಕಾ ಗೆಹ್ಲೋಟ್, ಕಾದಂಬರಿ ಎಂ.ವಾಡೆ, ಮಜಿಲಿ ಡೆ ಪ್ಯೂ ಕಾಂಪ್ ಮತ್ತು ರೂಥ್ ಡೇವಿಡ್ ರವರು ಸಹ ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು.
ಆರೋಪ ತೀವ್ರಗೊಳ್ಳುತ್ತಲೇ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಅಕ್ಬರ್ ಮೇಲಿನ ಆರೋಪಗಳನ್ನು ಪರಿಶೀಲಿಸಿ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv