ಮಸ್ಕತ್: ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ (Union Minister of State for External Affairs) ವಿ ಮುರಳೀಧರನ್ (V Muraleedharan) ಅವರು ಗುರುವಾರ ಮಸ್ಕತ್‌ನಲ್ಲಿರುವ (Muscat) ಐತಿಹಾಸಿಕ ಶಿವ ದೇವಾಲಯಕ್ಕೆ (Shiva Temple) ಭೇಟಿ ನೀಡಿ ಭಾರತ ಮತ್ತು ಓಮನ್ (Oman) ದೇಶಗಳ ನಡುವಿನ ಶಾಶ್ವತ ಸ್ನೇಹಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಕುರಿತು ಮುರಳೀಧರನ್ ಎಕ್ಸ್‌ನಲ್ಲಿ (X) ಮಾಹಿತಿ ಹಂಚಿಕೊಂಡಿದ್ದಾರೆ. ಮೋತೀಶ್ವರ್ ಮಹಾದೇವ್ ಎಂದು ಕರೆಯಲ್ಪಡುವ ಮಸ್ಕತ್‌ನ ಐತಿಹಾಸಿಕ ಶಿವ ದೇವಾಲಯಕ್ಕೆ ಭೇಟಿ ನೀಡಿದ್ದು, ಈ ದೇವಾಲಯ ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವನ್ನು ಹೊಂದಿದೆ. ಇದು ಭಾರತ ಮತ್ತು ಒಮನ್ ನಡುವಿನ ನಿರಂತರ ಸಾಂಸ್ಕೃತಿಕ ಸಂಬಂಧಗಳಿಗೆ ಸಾಕ್ಷಿಯಾಗಿದೆ. ಭಾರತ ಮತ್ತು ಒಮನ್ ಜನರ ನಡುವಿನ ಶಾಶ್ವತ ಸ್ನೇಹಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೈಡನ್ ನಿರ್ಗಮನದ ಬಳಿಕ ಹಮಾಸ್ ದಾಳಿ ತೀವ್ರ – ಇಂದು ಇಸ್ರೇಲ್‌ಗೆ ರಿಷಿ ಸುನಾಕ್ ಭೇಟಿ
Advertisement
Advertisement
ವಿದೇಶಾಂಗ ವ್ಯವಹಾರಗಳು ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು ಅಕ್ಟೋಬರ್ 18 ಮತ್ತು 19ರಂದು ಒಮನ್ ಸುಲ್ತಾನೇಟ್‌ಗೆ ತಮ್ಮ ಮೂರನೇ ಅಧಿಕೃತ ಭೇಟಿಯನ್ನು ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿತ್ತು. ಅವರ ಭೇಟಿಯ ಸಂದರ್ಭದಲ್ಲಿ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರು ಒಮಾನಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಗಾಜಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ ಮಾಡಿಲ್ಲ: ಬೈಡೆನ್
Advertisement
ಈ ವೇಳೆ ಮುರಳೀಧರನ್ ಅವರು ‘ಮಾಂಡವಿಯಿಂದ ಮಸ್ಕತ್‌ಗೆ: ಭಾರತೀಯ ಸಮುದಾಯ ಮತ್ತು ಭಾರತ ಮತ್ತು ಓಮನ್‌ನ ಹಂಚಿಕೆಯ ಇತಿಹಾಸ’ ಎಂಬ ಉಪನ್ಯಾಸ ಸರಣಿಯನ್ನು ಉದ್ಘಾಟಿಸಲಿದ್ದಾರೆ. ಓಮನ್‌ನಲ್ಲಿರುವ ಭಾರತೀಯ ಸಮುದಾಯದ ಇತಿಹಾಸ ಮತ್ತು ಭಾರತ ಮತ್ತು ಓಮನ್ ನಡುವಿನ ಸಂಬಂಧಗಳಿಗೆ ಅದರ ಕೊಡುಗೆಯ ಮೇಲೆ ಬೆಳಕು ಚೆಲ್ಲುವ ಉಪನ್ಯಾಸ ಸರಣಿಯನ್ನು ಭಾರತೀಯ ರಾಯಭಾರ ಕಚೇರಿ ಆಯೋಜಿಸಿದೆ. ಇದನ್ನೂ ಓದಿ: ದೇಶ ತೊರೆಯಿರಿ – ಅಫ್ಘಾನ್ ಪ್ರಜೆಗಳಿಗೆ ಪಾಕ್ ದಿಢೀರ್ ಎಚ್ಚರಿಕೆ ನೀಡಿದ್ದು ಯಾಕೆ?
Advertisement
ಭೇಟಿಯ ಸಮಯದಲ್ಲಿ, ಅವರು ಒಮಾನಿ ನಾಯಕತ್ವ ಮತ್ತು ಗಣ್ಯರೊಂದಿಗೆ ಉನ್ನತ ಮಟ್ಟದ ಚರ್ಚೆಗಳನ್ನು ನಡೆಸಲಿದ್ದಾರೆ. ಅಲ್ಲದೇ ಓಮನ್‌ನ ನ್ಯಾಷನಲ್ ಮ್ಯೂಸಿಯಂನಲ್ಲಿ ಪ್ರದರ್ಶಿಸಲಾದ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್‌ನ ಸಂಗ್ರಹದಿಂದ ವಿಶೇಷವಾಗಿ ಸಂಗ್ರಹಿಸಲಾದ 20 ಕಲಾಕೃತಿಗಳ ಸಂಗ್ರಹವಾಗಿರುವ ‘ಇಂಡಿಯಾ ಆನ್ ಕ್ಯಾನ್ವಾಸ್: ಮಾಸ್ಟರ್‌ಪೀಸ್ ಆಫ್ ಮಾಡರ್ನ್ ಇಂಡಿಯನ್ ಪೇಂಟಿಂಗ್’ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ಇಂಧನ ಕೊರತೆ – ಪಾಕಿಸ್ತಾನದ 48 ವಿಮಾನಗಳ ಹಾರಾಟ ರದ್ದು
ಮುರಳೀಧರನ್ ಅವರು ವಿವಿಧ ಭಾರತೀಯ ಸಮುದಾಯ ಸಂಸ್ಥೆಗಳೊಂದಿಗೆ ಮತ್ತು ವೃತ್ತಿಪರರು, ನೀಲಿ ಕಾಲರ್ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಓಮನ್‌ನಲ್ಲಿ ನೆಲೆಸಿರುವ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ. ಇದನ್ನೂ ಓದಿ: ಐರನ್ ಡೋಮ್ ಆಯ್ತು ಈಗ ಐರನ್ ಬೀಮ್ – ಏನಿದು ಇಸ್ರೇಲ್ ಪವರ್‌ಫುಲ್ ವೆಪನ್?
Web Stories