ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Devegowda) ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ನಿರ್ಮಲಾ ಸೀತಾರಾಮನ್ ಅವರು ಗುರುವಾರ ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು. ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಇದನ್ನೂ ಓದಿ: ಅಭಿವೃದ್ಧಿಗೆ ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗ ಅವಶ್ಯಕ : ಪ್ರಹ್ಲಾದ್ ಜೋಶಿ
Today, the Union Finance Minister Smt. Nirmala Sitaraman came home to enquire after my health. That was very kind of her. I thank for her concern and visit. @nsitharaman @nsitharamanoffc pic.twitter.com/bmLLcNYqei
— H D Devegowda (@H_D_Devegowda) September 29, 2022
ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರು, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಉಪಸ್ಥಿತರಿದ್ದರು.
ಕೆಲ ದಿನಗಳಿಂದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸೇರಿದಂತೆ ಅನೇಕ ರಾಜಕೀಯ ಗಣ್ಯರು ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದನ್ನೂ ಓದಿ: ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ – ಪೊಲೀಸರಿಗೆ ವಾರ್ನಿಂಗ್ ನೀಡಿದ ಡಿಕೆಶಿ