ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬರ, ಪ್ರಕೃತಿ ವಿಕೋಪಗಳನ್ನು ಎದುರಿಸಲು ಮುಂಚಿತವಾಗಿಯೇ ಎಸ್‌ಡಿಆರ್‌ಎಫ್ ಅಡಿ 697 ಕೋಟಿ ರೂ. ಕೊಡಲಾಗಿದೆ. ಅದರಲ್ಲೇ ಬರಕ್ಕೂ ಹಣ ವಿನಿಯೋಗ ಮಾಡಿಕೊಳ್ಳಬಹುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ನಿರ್ಮಲಾ ಸೀತಾರಾಮನ್, ಎಸ್‌ಡಿಆರ್‌ಎಫ್ ಅಡಿ 929.60 ಅನುದಾನ ಇದೆ. ಇದರಲ್ಲಿ 697 ಕೋಟಿ ಕೇಂದ್ರ ಪಾಲನ್ನು ಎರಡು ಕಂತುಗಳಲ್ಲಿ ಕೊಡಲಾಗಿದೆ. ಈ ಹಣ ಮುಂಚಿತವಾಗಿಯೇ ಬಿಡುಗಡೆ ಮಾಡಲಾಗಿದೆ. ಇದರಲ್ಲೇ ಬರ ಪರಿಹಾರಕ್ಕೂ ಅನುದಾನ ಬಳಸಿಕೊಳ್ಳಲು ಅವಕಾಶ ಇದೆ. ಕೇಂದ್ರದಿಂದ ಬರ ಪರಿಹಾರ ವಿಳಂಬವಾಗಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಪುಲ್ವಾಮ ದಾಳಿಗೆ ಬಿಜೆಪಿ ಕಾರಣ ಎಂಬ ಹೇಳಿಕೆ – ಪರಮೇಶ್ವರ್ ಸೇರಿ ಶಾಸಕರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಬರಕ್ಕೆ ಕೇಂದ್ರ ಹಣ ಕೊಟ್ಟಿಲ್ಲ ಅನ್ನೋದು ತಪ್ಪು. ಸದ್ಯದಲ್ಲೇ ಕೇಂದ್ರದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ ಬರ ಪರಿಹಾರ ಬಿಡುಗಡೆ ಮಾಡಲಿದೆ. ಈ ಸಭೆಯಲ್ಲಿ ತೀರ್ಮಾನವಾಗುವ ಬರ ಪರಿಹಾರ ಬಿಡುಗಡೆಗೆ ಕೇಂದ್ರ ಚುನಾವಣಾ ಆಯೋಗದ ಅನುಮತಿಯನ್ನೂ ಕೇಳಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ತೆರಿಗೆ ಹಂಚಿಕೆ ಕಳೆದ ಮಾರ್ಚ್ ವರೆಗೆ ಪೂರ್ಣ ಕೊಡಲಾಗಿದೆ. ನಾಲ್ಕು ಪಟ್ಟು ಹೆಚ್ಚು ಕೊಡಲಾಗಿದೆ. 15ನೇ ಹಣಕಾಸು ಆಯೋಗ ತನ್ನ ಮಧ್ಯಂತರ ವರದಿಯಲ್ಲಿ 5495 ಕೋಟಿ ವಿಶೇಷ ಅನುದಾನ ಕೊಡಬೇಕು ಅಂತ ಶಿಫಾರಸ್ಸು ಮಾಡಿದ್ದು ಹೌದು. ಆದರೆ ಅಂತಿಮ ವರದಿಯಲ್ಲಿ ಆ ಶಿಫಾರಸು ಇರಲಿಲ್ಲ. ಹಾಗಾಗಿ ಆ ವಿಶೇಷ ಅನುದಾನ ಕರ್ನಾಟಕಕಕ್ಕೆ ಕೊಡುವ ಪ್ರಶ್ನೆಯೇ ಬರಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಪಕ್ಷ ನಾಯಕರನ್ನು ಬಂಧಿಸುವ ಮೋದಿಯವರು ಪೊಳ್ಳು ಜಗತ್ತಿನಲ್ಲಿ ಬದುಕುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಮತ್ತೊಂದು 6,000 ಸಾವಿರ ಕೋಟಿ ವಿಶೇಷ ಅನುದಾನ ಕೊಡಬೇಕು ಅಂತಾರೆ. ಅದು ಸುಳ್ಳು. ಹಣಕಾಸು ಆಯೋಗ ಹೇಳದೇ ಹೋದರೂ ರಾಜ್ಯಕ್ಕೆ ಕೇಂದ್ರ 8,035.09 ಕೋಟಿ ಬಡ್ಡಿರಹಿತ ಸಾಲ ಕೊಡಲಾಗಿದೆ. ಇದನ್ನ ಕಾಂಗ್ರೆಸ್‌ನವರು ಎಲ್ಲೂ ಮಾತಾಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ತೆರಿಗೆ ಹಂಚಿಕೆ ಅನ್ಯಾಯ ಕುರಿತ ಬಹಿರಂಗ ಚರ್ಚೆಗೆ ಕೃಷ್ಣಬೈರೇಗೌಡ ಪಂಥಾಹ್ವಾನಕ್ಕೆ ಪ್ರತಿಕ್ರಿಯೆ ಕೊಡಲು ನಿರ್ಮಲಾ ಸೀತಾರಾಮನ್ ನಿರಾಕರಿಸಿದರು.