ಸಾಂದರ್ಭಿಕ ಚಿತ್ರ
ಬೆಂಗಳೂರು: ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ನೆಲೆ ಊರಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸಿದ್ಯಾ ಎನ್ನುವ ಎನ್ನುವ ಪ್ರಶ್ನೆ ಮೂಡಿದ್ದು, 8ನೇ ತರಗತಿಯವರೆಗೂ ಹಿಂದಿ ಕಲಿಕೆ ಕಡ್ಡಾಯ ಮಾಡಲು ಮಾನವ ಸಂಪನ್ಮೂಲ ಇಲಾಖೆ ಚಿಂತನೆ ನಡೆಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
Advertisement
ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಅಸ್ಸಾಂ, ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಕಲಿಕೆ ಕಡ್ಡಾಯ ಇರಲಿಲ್ಲ. ಆದರೆ ಕಸ್ತೂರಿರಂಗನ್ ನೇತೃತ್ವದ ಸಮಿತಿಯ ನೂತನ ಶಿಕ್ಷಣ ನೀತಿ ಶಿಫಾರಸು ನೆಪದಲ್ಲಿ ಹಿಂದಿ ಹೇರಿಕೆಗೆ ಹುನ್ನಾರ ನಡೆಸಿದೆ ಎನ್ನಲಾಗಿದೆ.
Advertisement
Advertisement
ಸಾಂದರ್ಭಿಕ ಚಿತ್ರ
Advertisement
ಈ ಸುದ್ದಿ ಬಹಿರಂಗ ಆಗುತ್ತಲೇ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಕಾಯ್ದೆ ಜಾರಿಗೆ ಬರಬಾರದು ಎಂದು ಕನ್ನಡಪರ ಹೋರಾಟಗಾರರ ಆಗ್ರಹಿಸಿದ್ದಾರೆ. ಕೇವಲ ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶದಿಂದಲೂ ಈ ಕುರಿತು ಅಸಮಾಧಾನ ವ್ಯಕ್ತವಾಗಿದೆ. ಪ್ರಮುಖವಾಗಿ ಮಹಾರಾಷ್ಟ್ರದ ಶಿವಸೇನೆ ಪಕ್ಷದ ಮುಖಂಡರು ಕೂಡ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
The Committee on New Education Policy in its draft report has not recommended making any language compulsory. This clarification is necessitated in the wake of mischievous and misleading report in a section of the media.@narendramodi @PMOIndia
— Prakash Javadekar (@PrakashJavdekar) January 10, 2019
ಇತ್ತ ಹಿಂದಿ ಹೇರಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದಂತೆ ಎಚ್ಚೆತ್ತ ಕೇಂದ್ರ ಮಾನವ ಸಂಪ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವ್ಡೇಕರ್ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಭಾಷೆಯನ್ನು ಕಡ್ಡಾಯ ಮಾಡುವ ಆಲೋಚನೆ ಕೇಂದ್ರದ ಮುಂದಿಲ್ಲ. ನೂತನ ಶಿಕ್ಷಣ ನೀತಿ ಸಂಬಂಧ ಕಸ್ತೂರಿರಂಗನ್ ನೇತೃತ್ವದ ಸಮಿತಿ, ಹಿಂದಿ ಭಾಷೆ ಕಡ್ಡಾಯ ಸಂಬಂಧ ಯಾವುದೇ ಶಿಫಾರಸು ಮಾಡಿಲ್ಲ. ಕೆಲವೊಂದು ಮಾಧ್ಯಮಗಳು ತಪ್ಪು ಸುದ್ದಿಯನ್ನು ಪ್ರಕಟಿಸಿ ಗೊಂದಲ ಮೂಡಿಸಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv