ಹುಬ್ಬಳ್ಳಿ: ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆರೋಪಿಸಿದರು.
ಹುಬ್ಬಳ್ಳಿಯಲ್ಲಿ (Hubballi) ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ಸರ್ಕಾರ ಟೆಂಡರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಒಲಿಂಪಿಕ್ಸ್, ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದವರಿಗೆ ನೇಮಕಾತಿ ಪತ್ರ ವಿತರಿಸಿದ ಸಿಎಂ
ಟೆಂಡರ್‌ನಲ್ಲಿ ಸ್ಲ್ಯಾಬ್ ವಿಧಿಸಿದಂತೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಸಹ ಕಾಂಗ್ರೆಸ್‌ನವರು ಆಯಾ ದರ್ಜೆ, ಶ್ರೇಣಿ, ಹುದ್ದೆ, ಪ್ರದೇಶವಾರು ರೇಟ್ ಸ್ಲ್ಯಾಬ್ ಹಾಕಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಹರಿಹಾಯ್ದರು.
ಹೀಗೆ ವರ್ಗಾವಣೆ ಪಡೆದ ಅಧಿಕಾರಿಗಳು ಅನಿವಾರ್ಯವಾಗಿ ಕಲೆಕ್ಷನ್‌ನಲ್ಲಿ ನಿರತರಾಗುತ್ತಾರೆ. ಇದು ಅಧಿಕಾರಿಗಳ ತಪ್ಪಲ್ಲ. ನಮ್ಮ ವ್ಯವಸ್ಥೆಯ ಲೋಪ. ಕಾಂಗ್ರೆಸ್ ಹಿಂದಿನಿಂದಲೂ ಈ ರೀತಿ ಭ್ರಷ್ಟಾಚಾರ ವ್ಯವಸ್ಥೆಯನ್ನು ಪೋಷಿಸಿಕೊಂಡು ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನೀವು ರೈತರ ಮಗ, ಈಗ ಪ್ಯಾಂಟ್ ಬಿಚ್ಚಿ ಪಂಚೆ ಹಾಕಿದ್ದೀರಿ: ಹೆಚ್‍ಡಿಕೆಗೆ ಡಿಕೆಶಿ ವ್ಯಂಗ್ಯ
ಕಾನೂನು ಸುವ್ಯವಸ್ಥೆ ಇಲ್ಲ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆಯೇ ಇಲ್ಲವಾಗಿದೆ. ಅಪರಾಧಿ ಕೃತ್ಯಗಳು ಹೆಚ್ಚುತ್ತಲೇ ಇವೆ. ಅಪರಾಧಿಗಳನ್ನು ಬೆಂಬಲಿಸುತ್ತ ಪೊಲೀಸ್ ಅಧಿಕಾರಿಗಳ ಕೈ ಕಟ್ಟಿ ಹಾಕಿದ್ದಾರೆ ಎಂದು ಕಿಡಿಕಾರಿದರು.