ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು (Pralhad Joshi) ಕೇಂದ್ರ ಶಿಕ್ಷಣ ಸಚಿವರಾಗಿ (Education Minister) ಅಧಿಕಾರ ವಹಿಸಿಕೊಂಡಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ ನಂತರ, ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ಹುದ್ದೆಗಿಂತ ರಾಷ್ಟ್ರ ಮೇಲು – ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಅಮಿತ್ ಶಾ ಮಾತು

ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ, ರಾಷ್ಟ್ರಪತಿಗಳ ಕಚೇರಿ ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿಯನ್ನು ದೃಢಪಡಿಸಲಾಗಿತ್ತು. ಪ್ರಧಾನಿಗಳ ಶಿಫಾರಸಿನ ಮೇರೆಗೆ ಸಚಿವ ಜೋಶಿಯವರಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಅದರಂತೆ ಜೋಶಿಯವರು ಇಂದು (ಜು.26) ಅಧಿಕಾರ ವಹಿಸಿಕೊಂಡಿದ್ದಾರೆ.
ಸದ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯನ್ನು ಅವರು ನಿರ್ವಹಣೆ ಮಾಡುತ್ತಿದ್ದಾರೆ. ಇದರೊಂದಿಗೆ ಶಿಕ್ಷಣ ಸಚಿವರಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ. ಇದನ್ನೂ ಓದಿ: ʻಇದಿನ್ನೂ ಆರಂಭ ಅಷ್ಟೇʼ – ಬೆಳ್ಳಂಬೆಳಗ್ಗೆ ವಿಡಿಯೋ ಸಂದೇಶ ಹಂಚಿಕೊಂಡ ಅಭಿಜೀತ್ ದೀಪ್ಕೆ
