Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಪ್ರಚೋದನಕಾರಿ ನೀತಿ: ಕಾಂಗ್ರೆಸ್‌ ವಿರುದ್ಧ ಜೋಶಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಪ್ರಚೋದನಕಾರಿ ನೀತಿ: ಕಾಂಗ್ರೆಸ್‌ ವಿರುದ್ಧ ಜೋಶಿ ಕಿಡಿ

Latest

ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಪ್ರಚೋದನಕಾರಿ ನೀತಿ: ಕಾಂಗ್ರೆಸ್‌ ವಿರುದ್ಧ ಜೋಶಿ ಕಿಡಿ

Public TV
Last updated: February 10, 2026 4:26 pm
Public TV
Share
2 Min Read
Prahlad Joshi 1
SHARE

– ರಾಹುಲ್ ಗಾಂಧಿ & ಕಾಂಗ್ರೆಸ್ ಪಕ್ಷ ತೀರಾ ಕೆಳಮಟ್ಟಕ್ಕೆ ಇಳಿಯುತ್ತಿದೆ ಎಂದ ಕೇಂದ್ರ ಸಚಿವ

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ಸಂಸದರು ಪ್ರಧಾನಿ ಮೋದಿ (PM Modi) ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹೊತ್ತೊಯ್ದಿರುವುದು ಪ್ರಚೋದನಕಾರಿ ನೀತಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಕಿಡಿ ಕಾರಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಆಗಮಿಸುವ ಮೊದಲು ಸಂಸತ್ತಿನಲ್ಲಿ ನಡೆದ ಘಟನೆ ತೀವ್ರ ಆಘಾತಕಾರಿ ಎಂದು ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೇಜರ್‌ ನರವಣೆ ʻಅಪ್ರಕಟಿತ ಆತ್ಮಚರಿತ್ರೆʼ ಎಬ್ಬಿಸಿದ ಬಿರುಗಾಳಿ – 2020 ಆಗಸ್ಟ್‌ 31ರ ರಾತ್ರಿಗೂ ಮುನ್ನ ಏನಾಯ್ತು?

ಪ್ರಧಾನ ಮಂತ್ರಿ ಪೀಠದವರೆಗೂ, ಗದ್ದಲದ ನಡುವೆಯೂ ವಿರೋಧ ಪಕ್ಷದ ಸಂಸದರು ಎಲ್ಲಾ ಮಿತಿಗಳನ್ನು ದಾಟಿದ್ದಾರೆ. ಇವರದ್ದು ಚರ್ಚೆ ಆಗಿರಲಿಲ್ಲ. ಪ್ರತಿಭಟನೆಯೂ ಆಗಿರಲಿಲ್ಲ. ಇದು ಕೇವಲ ಉದ್ದೇಶಪೂರ್ವಕವಾದಂತಹ ಪ್ರಚೋದನೆಯಾಗಿತ್ತು ಎಂದು ಜೋಶಿ ಆರೋಪಿಸಿದ್ದಾರೆ. ಒಬ್ಬ ಸಂಸದರಾಗಿ ಸದನದ ಘನತೆ ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ. ಆದರೆ, ಕಾಂಗ್ರೆಸ್ ಸಂಸದರ ನಡೆ ತೀವ್ರ ವಿರೋಧಾಭಾಸವಾಗಿದೆ ಎಂದು ಆಕ್ಷೇಪಿಸಿದ್ದಾರೆ.

pm modi mann ki baat

ಸಂಸತ್ತಿನ ಆವರಣದೊಳಗೆ ಗೌರವಾನ್ವಿತ ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಹೊತ್ತೊಯ್ಯುವುದು ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್ ಅದೆಷ್ಟು ಕೆಳಮಟ್ಟಕ್ಕೆ ಇಳಿಯುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಖಜಾನೆ ಖಾಲಿ ಮಾಡಿದವರು ಮೊದಲು ತಮ್ಮನ್ನೇ ಪ್ರಶ್ನಿಸಿಕೊಳ್ಳಲಿ. ಭಾರತ-ಅಮೆರಿಕ ವಾಣಿಜ್ಯ ಒಪ್ಪಂದ ಟೀಕಿಸುವ ಮೊದಲು ಸಿಎಂ ಸಿದ್ದರಾಮಯ್ಯ ಅವರು, ಆರ್ಥಿಕ ಸಂಪದ್ಭರಿತವಾಗಿದ್ದ ರಾಜ್ಯದ ಖಜಾನೆ ಖಾಲಿ ಮಾಡಿರುವ ಬಗ್ಗೆ ತಮ್ಮನ್ನೊಮ್ಮೆ ಪ್ರಶ್ನೆ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ರೋಷನ್ ಬೇಗ್

ಆರ್ಥಿಕ ಸಂಪತ್ತಿನಿಂದ ಕೂಡಿದ್ದ ಕರ್ನಾಟಕದ ಖಜಾನೆಯನ್ನು ಕಾಂಗ್ರೆಸ್ ಸರ್ಕಾರ ಇಂದು ಖಾಲಿ ಮಾಡಿದ್ದಲ್ಲದೆ, ಸಂಪೂರ್ಣ ಅಭಿವೃದ್ಧಿಯನ್ನು ಸ್ಥಗಿತಗೊಳಿಸಿದೆ. ಹೂಡಿಕೆದಾರರ ವಿಶ್ವಾಸವನ್ನು ಸಹ ಕಳೆದುಕೊಂಡಿದೆ. ಇದೆಲ್ಲಾ ಏಕೆ? ಎಂಬುದನ್ನು ಸಿಎಂ ಉತ್ತರಿಸಲಿ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ಮೊದಲು ‘ಭಾರತದ ಹಿತಾಸಕ್ತಿ’ ಕುರಿತು ಉಪನ್ಯಾಸ ನೀಡುವುದೊಳಿತು. 2008ರಲ್ಲಿ 26/11ರ ನಂತರ ಮುಂಬೈ ಹೊತ್ತಿ ಉರಿಯುತ್ತಿದ್ದರೂ ಕಾಂಗ್ರೆಸ್ ಮೌನವಹಿಸಿತು. ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಗೃಹ ಸಚಿವರು ಬಾಹ್ಯ ರಾಜತಾಂತ್ರಿಕ ಒತ್ತಡಕ್ಕೆ ಮಣಿದ ಪರಿಣಾಮ ಭಾರತ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿತ್ತು ಎಂಬುದನ್ನು ಜೋಶಿ ಸಿಎಂಗೆ ನೆನಪಿಸಿದ್ದಾರೆ.

2020 ಮತ್ತು ಹಿಂದಿನ ವರ್ಷಗಳಲ್ಲಿ ನಮ್ಮ ಸೈನಿಕರು ಪಿಎಲ್‌ಎ ಆಕ್ರಮಣವನ್ನು ಎದುರಿಸುತ್ತಿದ್ದರೆ, ಇತ್ತ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಚೀನಾದ ಅಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದರು. ಯಾವುದೊಂದು ಬಹಿರಂಗವಾಗದಂತೆ ನೋಡಿಕೊಂಡರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀತಿಗಳು ನಿಷ್ಕ್ರಿಯಗೊಂಡವು ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಭಾರತದ ನೀತಿಗಳನ್ನು ದುರ್ಬಲಗೊಳಿಸಿ, ಅವಮಾನಿಸಲಾಯಿತು. ಜಾಗತಿಕ ವಿಶ್ವಾಸ ಮತ್ತು ಕಾರ್ಯತಂತ್ರದ ನಿಲುವನ್ನು ಹಾಳು ಮಾಡಿತು. ಅಲ್ಪಾವಧಿಯ ರಾಜಕೀಯಕ್ಕಾಗಿ ಭಾರತದ ಸ್ಥಾನಮಾನವನ್ನು ದುರ್ಬಲಗೊಳಿಸಿತು. ಇದೆಲ್ಲಾ ಗೊತ್ತಿಲ್ಲದ ವಿಚಾರವೇ ಎಂದು ಚಾಟಿ ಬೀಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ದೃಢತೆ, ಆತ್ಮವಿಶ್ವಾಸ ಮತ್ತು ಅತ್ಯಂತ ಸ್ಪಷ್ಟವಾಗಿ ಜಾಗತಿಕವಾಗಿ ಯಶಸ್ವಿ ಮಾತುಕತೆ ನಡೆಸುತ್ತಿದೆ. ಕಾಂಗ್ರೆಸ್ ಇದನ್ನು ಅರಿತುಕೊಳ್ಳಲಿ. ಏನೇನೋ ಬಡಬಡಿಸುವುದನ್ನು ನಿಲ್ಲಿಸಲಿ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

TAGGED:congressNew DelhiPM ModiPralhad Joshiಕಾಂಗ್ರೆಸ್ನವದೆಹಲಿಪಿಎಂ ಮೋದಿಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

vinay kulkarni 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
3 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
33 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
33 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
55 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
58 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?