ಹುಬ್ಬಳ್ಳಿ: ಸಾವರ್ಕರ್ ಭಾವಚಿತ್ರ ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿದ್ದೂ ಕೂಡ ಸರಿಯಲ್ಲ ಎಂದರು
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು. ಸಿದ್ದರಾಮಯ್ಯ ವಿಪಕ್ಷ ನಾಯಕರು. ಅವರು ಏಲ್ಲಿ ಬೇಕಾದ್ರು ಹೋಗಬಹುದು. ಅವರ ಮೇಲೆ ಮೊಟ್ಟೆ ಎಸೆಯುವಂತದ್ದು ಸರಿಯಲ್ಲ. ಸಿದ್ದರಾಮಯ್ಯ ಅಷ್ಟೇ ಅಲ್ಲ ಯಾವ ಪಕ್ಷದ ನಾಯಕರಿಗೂ ಹೀಗೆ ಮಾಡಬಾರದು ಎಂದು ಜೋಶಿ ಹೇಳಿದ್ದಾರೆ.
Advertisement
Advertisement
ಸಾವರ್ಕರ್ ಭಾವಚಿತ್ರ ಕುರಿತಂತೆ ಸಿದ್ದರಮಯ್ಯ ಅವರ ಮುಸ್ಲಿಂ ಏರಿಯಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಜೋಶಿ, ಸಾವರ್ಕರ್ ಬಗ್ಗೆ ಹೀಗೆ ಮಾತನಾಡುತ್ತಿರುವ ಇವರು ನಕಲಿ ಕಾಂಗ್ರೆಸಿಗರು ಎಂದಿದ್ದಾರೆ.
Advertisement
“ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ” ಎಂದು ಸ್ವತಃ ಇಂಧಿರಾ ಗಾಂಧಿ ಅವರು ಹೇಳಿದ್ದರು. ಗಾಂಧಿಜೀ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಸಾವರ್ಕರ್ ಬಿಡುಗಡೆಗೆ ಬ್ರಿಟೀಷ್ ಸರ್ಕಾರಕ್ಕೆ ಆಗ್ರಹಿಸಿದ್ದರು. ಅವರೆಲ್ಲ ಒರಿಜಿನಲ್ ಕಾಂಗ್ರೆಸಿಗರು. ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ಸಾವರ್ಕರ್ ಅವರ ಹೋರಾಟ, ವ್ಯಕ್ತಿತ್ವಕ್ಕೆ ಗೌರವ ಕೊಡುತ್ತಿದ್ದರು. ಈಗಿರುವವರು ನಕಲಿ ಕಾಂಗ್ರೆಸಿಗರು. ಇವರು ಸಾವರ್ಕರ್ ವಿರುದ್ಧ ಮಾತನಾಡುತ್ತಿದ್ದಾರೆ. ಇವರು ಒರಿಜಿನಲ್ ಕಾಂಗ್ರೆಸಿಗರಲ್ಲ ಎಂದು ಜೋಶಿ ಟೀಕಿಸಿದ್ದಾರೆ.
Advertisement
ತುಷ್ಠಿಕರಣ ರಾಜಕಾರಣದ ಭಾಗವಾಗಿ ಸಿದ್ದರಾಮಯ್ಯ ಅವರು ಬಾಯಿಗೆ ಬಂದ ಹಾಗೆ ಮಾತನಾಡ್ತಿದ್ದಾರೆ. ಮುಸ್ಲಿಂ ಒಲೈಕೆಗ ರಾಜಕಾರಣದಲ್ಲಿ ನಿರತರಾಗಿದ್ಧಾರೆ. ಸಿದ್ದರಾಮಯ್ಯ ಅವರು ಕಾಂಗ್ರೆಸಿಗರಲ್ಲ. ಹೀಗಾಗಿ ಅವರ ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಈ ರೀತಿಯ ಹೇಳಿಕೆಗಳನ್ನ ನೀಡುತ್ತಿದ್ದಾರೆ ಎಂದರು.
ಅವರು ಯಾರನ್ನಾದ್ರು ಒಲೈಸಿಕೊಳ್ಳಲಿ. ಆದರೆ, ಸಾವರ್ಕರ್ ಬಗ್ಗೆ ಮಾತಾಡುವುದು ಸರಿಯಲ್ಲ. ಅವರೊಬ್ಬ “ರಿಮಾರ್ಕಬಲ್ ಸನ್ ಆಫ್ ಇಂಡಿಯಾ” ಅಂತಾ ಇಂದಿರಾ ಗಾಂಧಿ ಅವರೇ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಇದನ್ನ ತಿಳಿದುಕೊಳ್ಳಲಿ ಎಂದು ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದರು.