ಉಡುಪಿ: ಲವ್ ಜಿಹಾದ್ ಒಂದು ಪಿಡುಗು ತಕ್ಷಣ ಕೊನೆಯಾಗಬೇಕು. ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.
Advertisement
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರೀತಿಯ ಹೆಸರಲ್ಲಿ ಮದುವೆಯಾಗ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡ್ತಾರೆ. ಹಾಗೆಯೇ ಕೈಗೊಂದು ಮಗು ಕೊಟ್ಟು ಓಡಿ ಹೋಗ್ತಾರೆ. ತಲಾಖ್ ಎಂದು ಹೇಳಿ ಇನ್ನೊಬ್ಬರನ್ನ ಮದುವೆಯಾಗ್ತಾರೆ. ಇದರಿಂದ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳಿದಂತಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳ್ಬೇಕಿತ್ತಾ..?- ಬಿ.ಸಿ.ನಾಗೇಶ್ ಗರಂ
Advertisement
ದೇಶದ ಅನೇಕ ಭಾಗಗಳಲ್ಲಿ ನಮ್ಮ ಹೆಣ್ಣುಮಕ್ಕಳು ಸಮಸ್ಯೆ ಎದುರಿಸುತ್ತಿದ್ದಾರೆ. ಲವ್ ಜಿಹಾದ್‌ಗೆ ಹೆಣ್ಣುಮಕ್ಕಳು ಬಲಿಯಾದರೆ ತಂದೆ-ತಾಯಿಯ ದುಃಖ ಕೇಳುವವರು ಯಾರು? ಲವ್ ಜಿಹಾದ್ ತಡೆಗೆ ಬಲವಾದ ಕಾನೂನು ಜಾರಿ ಮಾಡುವ ಅಗತ್ಯವಿದೆ. ಹಿಂದಿನಿಂದಲೂ ಈ ಬಗ್ಗೆ ವಾದ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದಾರೆ.
Advertisement
Advertisement
ಇದೇ ವೇಳೆ ಪಠ್ಯಪುಸ್ತಕ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ವ್ಯಕ್ತಿ ಅಥವಾ ಸಮಿತಿಯ ಬಗ್ಗೆ ನಾನು ಮಾತನಾಡಲ್ಲ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ರಾಜ್ಯ ನಮ್ಮದು. ನಮ್ಮ ಕನ್ನಡ ಸಾಹಿತ್ಯ ಸತ್ವಯುತವಾಗಿದೆ, ಕನ್ನಡದ ಸಾಹಿತಿ ಕವಿಗಳಲ್ಲಿ ಅಷ್ಟೊಂದು ತಾಕತ್ತು ಇದೆ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ
ನಮ್ಮ ರಾಜ್ಯದ ಏಕೀಕರಣ ದಂತಹ ವಿಚಾರಗಳು ಕೂಡ ಮಕ್ಕಳಿಗೆ ತಿಳಿಯುವಂತಾಗಬೇಕು. ವಿವಾದ ಇಲ್ಲದಂತಹ ವ್ಯಕ್ತಿಗಳನ್ನು ಸಮಿತಿಯಲ್ಲಿ ಜೋಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಎಲ್ಲರಿಗೂ ಪ್ರಿಯವಾದ ವಿಚಾರಗಳನ್ನು ಹೇಳಬೇಕು. ಎಲ್ಲರನ್ನೂ ಖುಷಿಪಡಿಸುವುದು ಕಷ್ಟ, ಎಲ್ಲರೂ ಸಮಾನ ಎನ್ನುವ ರೀತಿಯಲ್ಲಿ ಪರಿಷ್ಕರಣೆಯಾಗಬೇಕು. ಮಕ್ಕಳ ಮನಸ್ಸನ್ನು ಪುಳಕಗೊಳಿಸುವ, ವಿಕಸಿತ ಗೊಳಿಸುವ ಪಠ್ಯಗಳು ಬರಬೇಕು ಎಂದು ಸಲಹೆ ನೀಡಿದ್ದಾರೆ.