ಇಂಫಾಲ್: ವಿಧಾನಸಭಾ ಚುನಾವಣೆ ಇರುವುದರಿಂದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ಮಣಿಪುರದ ಮಹಿಳೆಯರ ಜೊತೆ ಸೇರಿ ತಾವು ಕೂಡ ಅಲ್ಲಿನ ಸಾಂಪ್ರದಾಯಿಕ ಜಾನಪದ ನೃತ್ಯಕ್ಕೆ ಹೆಜ್ಜೆ ಹಾಕಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Advertisement
ಇಂಫಾಲ್ ಪೂರ್ವದ ವಾಂಗ್‍ಖೈ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಇರಾನಿ ಭಾಗವಹಿಸಿದ್ದರು. ಈ ವೇಳೆ ಮಣಿಪುರದ ಜಾನಪದ ಕಲಾವಿದರೊಂದಿಗೆ ನೃತ್ಯ ಮಾಡಿದರು. ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಪರ ಸ್ಮೃತಿ ಇರಾನಿ ಪ್ರಚಾರ ನಡೆಸಿದ್ದಾರೆ. ಇದನ್ನೂ ಓದಿ: ಗಂಡನ ವೀರ್ಯವನ್ನು ಕೇಕ್‍ನಲ್ಲಿ ಮಿಕ್ಸ್ ಮಾಡಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಶಿಕ್ಷಕಿಗೆ 40 ವರ್ಷ ಜೈಲು
Advertisement
#WATCH | Union Minister Smriti Irani joins artists performing traditional dance at an event in Wangkhei area of Imphal East, Manipur pic.twitter.com/jQtqKMkOJW
— ANI (@ANI) February 18, 2022
Advertisement
ಮೊದಲ ಹಂತದ ಮತದಾನ ಫೆಬ್ರವರಿ 28ರಂದು ಮತ್ತು ಎರಡನೇ ಹಂತದ ಮತದಾನ ಮಾರ್ಚ್ 5ರಂದು ನಡೆಯಲಿದೆ. ಮಣಿಪುರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಪ್ರತಿಭಾವಂತ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನದ ಭರವಸೆ, ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿಯನ್ನು 1,000 ರೂ.ಗೆ ಹೆಚ್ಚಿಸುವುದು ಮತ್ತು 100 ಕೋಟಿ ರೂ. ಆರಂಭಿಕ ನಿಧಿಯನ್ನು ಸ್ಥಾಪಿಸುವುದು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಣಿ ಗೈದಿಂಲಿಯು ನೂಪಿ ಮಹೈರೋಯ್ ಸಿಂಗಿ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳ ಹೆಣ್ಣುಮಕ್ಕಳಿಗೆ 25,000 ರೂ. ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ.