ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಿತವ್ಯಯ, ಇಂಧನ ಉಳಿತಾಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ ನೀಡಿರುವ ಹಿನ್ನೆಲೆ, ಕೇಂದ್ರ ಸಚಿವ ವಿ.ಸೋಮಣ್ಣ (V.Somanna) ಹಾಗೂ ಸಂಸದ ಪಿ.ಸಿ.ಮೋಹನ್ (P.C.Mohan) ಬೆಂಗಳೂರಿನಲ್ಲಿ ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ ಮಾದರಿಯಾದರು.
ಬೆಂಗಳೂರಿನ ಎಂ.ಜಿ ರಸ್ತೆ ಮೆಟ್ರೋ ಸ್ಟೇಷನ್‌ನಿಂದ ಸ್ವಾಮಿ ವಿವೇಕಾನಂದ ಮೆಟ್ರೋ ಸ್ಟೇಷನ್‌ವರೆಗೆ ಕೇಂದ್ರ ಸಚಿವ ಸೋಮಣ್ಣ ಹಾಗೂ ಸಂಸದ ಪಿ.ಸಿ.ಮೋಹನ್ ಮೆಟ್ರೋದಲ್ಲಿ ಸಂಚರಿಸಿದರು. ಇಂಧನ ಉಳಿತಾಯ, ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವುದು ಹಾಗೂ ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಪ್ರಯಾಣ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಇಂಧನ ದರ ಏರಿಕೆ ಬೆನ್ನಲ್ಲೇ ಅಗತ್ಯ ವಸ್ತುಗಳ ಹಣದುಬ್ಬರ – ಅಕ್ಕಿ ದರ ಕೆಜಿಗೆ 3 ರೂ. ಏರಿಕೆ
ಬಳಿಕ ಸ್ವಾಮಿ ವಿವೇಕಾನಂದ ಮೆಟ್ರೋ ಸ್ಟೇಷನ್‌ನಿಂದ ರೈಲ್ವೇ ನಿಲ್ದಾಣದವರೆಗೆ ಸೋಮಣ್ಣ ಹಾಗೂ ಪಿ.ಸಿ.ಮೋಹನ್ ಇವಿ ಬೈಕ್‌ನಲ್ಲಿ ಪ್ರಯಾಣಿಸಿದರು.
ಪ್ರಧಾನಿಯವರ ಮಿತವ್ಯಯ ಸಂದೇಶವನ್ನು ಪಾಲಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ವಿವಿಧ ರಾಜ್ಯಗಳಲ್ಲಿ ಸಾರ್ವಜನಿಕ ಸಾರಿಗೆ ಬಳಕೆ, ಇವಿ ವಾಹನಗಳ ಪ್ರಚಾರ ಹಾಗೂ ಇಂಧನ ಉಳಿತಾಯ ಕುರಿತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: PUBLiC TV Explained | ಜಾಗತಿಕ ಮಾರುಕಟ್ಟೆಯಲ್ಲಿ ಸಕ್ಕರೆ ಬಿಕ್ಕಟ್ಟು – ಭಾರತದಿಂದ ರಫ್ತು ಬಂದ್, ದಿಢೀರ್ ಸಮಸ್ಯೆ ಶುರುವಾಗಿದ್ದೇಕೆ?
ಮಧ್ಯಪ್ರಾಚ್ಯ ಯುದ್ಧದಿಂದ ಇಂಧನ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ ಮಿತವ್ಯಯ ಜೀವನಶೈಲಿಗೆ ಕರೆ ನೀಡಿದ್ದಾರೆ. ಯುದ್ಧ ಪರಿಸ್ಥಿತಿಗಳಿಂದ ತೈಲ ದರ ಈಗಾಗಲೇ ಏರಿಕೆಯಾಗಿದ್ದು, ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಸುವುದು ಹಾಗೂ ಅನಗತ್ಯ ಖರ್ಚುಗಳನ್ನು ತಪ್ಪಿಸುವುದು ಪ್ರತಿಯೊಬ್ಬರಿಗೂ ಅನಿವಾರ್ಯವಾಗಿದೆ ಎಂದಿದ್ದಾರೆ.

