ಮಸೀದಿಯಲ್ಲಿ ಒಗ್ಗಟ್ಟಿನ ಸಭೆ, ಮುಸ್ಲಿಂ ಮತಗಳಿಂದಲೇ ಕಾಂಗ್ರೆಸ್ ಅಧಿಕಾರ: ಜಮೀರ್

Public TV
1 Min Read
Zameer Ahmed Khan

ಬೆಂಗಳೂರು: ರಾಜ್ಯದಲ್ಲಿ ಸಿಎಂ ದಂಗಲ್ ನಡುವೆ ಸಚಿವ ಜಮೀರ್ ಅಹಮದ್ (Zameer Ahmed Khan) ಈ ಹಿಂದೆ ರಾಜಸ್ಥಾನದಲ್ಲಿ ಮುಸ್ಲಿಂ (Muslim) ಮತಗಳಿಂದಲೇ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂತು ಎಂದು ಆಡಿರುವ ಮಾತೊಂದು ಈಗ ವಿವಾದಕ್ಕೆ ಕಾರಣವಾಗಿದೆ.

ಆಗಸ್ಟ್ 25 ರಂದು ಜೈಪುರ ಪ್ರವಾಸ ಕೈಗೊಂಡಿದ್ದ ಜಮೀರ್, ಅಲ್ಲಿನ ಕಾಂಗ್ರೆಸ್ ಶಾಸಕರನ್ನು ಉದ್ದೇಶಿಸಿ ಮಾತಾಡಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಸ್ಲಿಮರೇ ಕಾರಣ. ಮುಸ್ಲಿಂ ಮತಗಳಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ವಿ. ಎಲ್ಲಾ ಹಂತ ರೀಚ್ ಮಾಡಿ ವಿಶ್ವಾಸ ಗಳಿಸಿದ್ವಿ. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಎಂದು ವಿವರಿಸಿದ್ದರು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು.

Zameer Ahmed Khan

ಈ ವೀಡಿಯೋ ಈಗ ವೈರಲ್ ಆಗಿದ್ದು, ಜಮೀರ್ ಧಾರ್ಮಿಕ ಸ್ಥಳಗಳನ್ನು ರಾಜಕೀಯಕ್ಕೆ ಬಳಸಿಕೊಂಡರು ಎಂಬ ಆಪಾದನೆ ಕೇಳಿಬಂದಿದೆ. ಇದು ಕಾಂಗ್ರೆಸ್‌ನ ಒಡೆದಾಳುವ ನೀತಿಗೆ ಉತ್ತಮ ಉದಾಹರಣೆ. ಹೀಗೆ ಆದ್ರೆ ಇಡೀ ದೇಶವನ್ನೇ ಕಾಂಗ್ರೆಸ್ ವಿಭಜಿಸುತ್ತೆ ಎಂದು ಬಿಜೆಪಿ ಕಿಡಿಕಾರಿದೆ. ಆದರೆ ಕಾಂಗ್ರೆಸ್‌ನ ಹಲವು ನಾಯಕರು ಮಾತ್ರ ಜಮೀರ್ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ‘5 ವರ್ಷ ನಾನೇ ಸಿಎಂ’ ಹೇಳಿಕೆಯಿಂದ ಯೂಟರ್ನ್ ಹೊಡೆದ ಸಿದ್ದರಾಮಯ್ಯ

ಚುನಾವಣೆ ಬಂದಾಗ ನಾಡಿನ ಜನತೆ ಯಾರು ಏನು ಮಾಡಿದ್ದಾರೆ ಅನ್ನೋದನ್ನು ನೋಡುತ್ತಾರೆ. ಒಂದು ಸಮುದಾಯ ನೋಡಲ್ಲ, ನಮಗೆ ವಿಶ್ವಾಸವಿದೆ ಎಂದು ಮಾಜಿ ಸಚಿವ ಗೋಪಾಲಯ್ಯ ನುಡಿದಿದ್ದಾರೆ.

ಎಲ್ಲಾ ಸಮುದಾಯದ ಜನರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಜ್ಯದ 7 ಕೋಟಿ ಜನರಿಗೆ ನಾವು ಧನ್ಯವಾದ ಸಲ್ಲಿಸಿದ್ದೇವೆ. ಆದರೆ ಅವರ ಸಮುದಾಯದ ವಿಚಾರಕ್ಕೆ ಬಂದಾಗ ನಾವು ಹೆಚ್ಚು ಕೆಲಸ ಮಾಡಿದ್ದೇವೆ ಎಂದು ಹೇಳಿಕೊಂಡಿರಬೇಕು. ಅದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದು: ಈಶ್ವರಪ್ಪ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article