Mandya | ಅಪರಿಚಿತ ವಾಹನ ಡಿಕ್ಕಿ – ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

Public TV
1 Min Read
Mandya Accident Couple Death

ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನ ಕದಬಹಳ್ಳಿ ಗ್ರಾಮದ ಬಳಿ ಜರುಗಿದೆ.

ಕೆ.ಆರ್.ಪೇಟೆ ತಾಲೂಕಿನ ಗದ್ದೇಹೊಸೂರು ಗ್ರಾಮದ ಶ್ವೇತಾರನ್ನು (38) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿದರಕ, ಗ್ರಾಮದ ನಾಗರಾಜುಗೆ (45) ಮದುವೆ ಮಾಡಿಕೊಡಲಾಗಿತ್ತು. ಇಬ್ಬರೂ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ – ಕೃತ್ಯ ಎಸಗಿದ್ದ ಲಾರಿ ಚಾಲಕ ಅರೆಸ್ಟ್

ಗ್ರಾಮದಲ್ಲಿ ಜಾತ್ರೆ ಇದ್ದ ಕಾರಣ ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಕದಬಹಳ್ಳಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋಗಿದ್ದು, ಸ್ಥಳದಲ್ಲೇ ದಂಪತಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ನಾಗಮಂಗಲ ತಾಲೂಕಿನ ಬಿಂಡಿಗನ ನವಿಲೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜಾತಿಗಣತಿ ವರದಿ ಯಾರನ್ನೋ ಕೂರಿಸಿ ಬರೆಸಿದಂತೆ ಇದೆ: ಸೂರಜ್ ರೇವಣ್ಣ ಕಿಡಿ

Share This Article