ನವದೆಹಲಿ: 23 ವಾರಗಳ ಭ್ರೂಣದ ಗರ್ಭಪಾತಕ್ಕೆ ಅವಕಾಶ ನೀಡುವಂತೆ ಕೋರಿ 25 ವರ್ಷದ ಅವಿವಾಹಿತ ಯುವತಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಸಮ್ಮತಿಯ ಸೆಕ್ಸ್‍ನಿಂದ ಗರ್ಭವತಿಯಾಗಿ 20 ವಾರಗಳು ಮೀರಿದ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ. ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಸತೀಶ್ ಚಂದ್ರಶರ್ಮಾ ನೇತೃತ್ವದ ವಿಭಾಗೀಯ ಪೀಠವು, ಒಪ್ಪಿಗೆಯ ಲೈಂಗಿಕ ಸಂಬಂಧದಿಂದ ಮಗುವನ್ನು ಹೆರುವ ಅವಿವಾಹಿತ ಮಹಿಳೆಗೆ ವೈದ್ಯಕೀಯ ಗರ್ಭಪಾತದ ನಿಯಮಗಳ ಪ್ರಕಾರ 20 ವಾರಗಳು ಮೀರಿದ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು(2003 MTP ನಿಯಮಗಳು ಪ್ರಕಾರ) ಅನುಮತಿ ಇಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬಿಸಾಡಿದ ಮಚ್ಚು ತೋರಿಸುತ್ತೇನೆಂದು ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗೆ ಗುಂಡೇಟು
Advertisement
Advertisement
ಅವಿವಾಹಿತ ಮಹಿಳೆಯಾಗಿರುವ ಮತ್ತು ಸಮ್ಮತಿಯಿಂದ ಗರ್ಭ ಧರಿಸಿರುವ ಅರ್ಜಿದಾರರು, ವೈದ್ಯಕೀಯ ಮುಕ್ತಾಯದ ನಿಯಮಗಳು 2003ರ ಅಡಿಯಲ್ಲಿ ಯಾವುದೇ ಷರತ್ತುಗಳನ್ನು ಸ್ಪಷ್ಟವಾಗಿ ಒಳಗೊಂಡಿರುವುದಿಲ್ಲ. ಆದ್ದರಿಂದ, ಸೆಕ್ಷನ್ 3(2)(ಬಿ) ಈ ಪ್ರಕರಣದ ಸತ್ಯಾಸತ್ಯತೆಗಳಿಗೆ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.
Advertisement
ಎಂಟಿಪಿ ನಿಯಮಗಳ 3ಬಿ ಪ್ರಕಾರ 20 ವಾರಗಳ ನಂತರ ಅವಿವಾಹಿತ ಮಹಿಳೆಯ ಗರ್ಭಧಾರಣೆಯನ್ನು ಮುಕ್ತಾಯಗೊಳಿಸಲು ಅನುಮತಿಸುವುದಿಲ್ಲ. ಆದ್ದರಿಂದ, ನ್ಯಾಯಾಲಯವು ಈಗಿರುವ ಶಾಸನವನ್ನು ಮೀರಿ ಹೋಗುವಂತಿಲ್ಲ ಎಂದು ತನ್ನ ಆದೇಶದಲ್ಲಿ ಸೇರಿಸಿದೆ.
Advertisement
ನ್ಯಾಯಾಲಯವು ಅರ್ಜಿಯನ್ನು ಬಾಕಿ ಉಳಿಸಿಕೊಂಡಿದೆ. ಆಗಸ್ಟ್ 26ರೊಳಗೆ ಅರ್ಜಿಯ ಬಗ್ಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ದೆಹಲಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದೆ.
ನಿಯಮಗಳ ಪ್ರಕಾರ, ಅತ್ಯಾಚಾರದ ಸಂತ್ರಸ್ತರು, ಅಪ್ರಾಪ್ತ ವಯಸ್ಕರು, ಗರ್ಭಾವಸ್ಥೆಯಲ್ಲಿ ವೈವಾಹಿಕ ಸ್ಥಿತಿ ಬದಲಾದ ಮಹಿಳೆಯರು, ಮಾನಸಿಕ ಅಸ್ವಸ್ಥ ಮಹಿಳೆಯರು ಅಥವಾ ಭ್ರೂಣದ ವಿರೂಪತೆ ಹೊಂದಿರುವ ಮಹಿಳೆಯರು ಮಾತ್ರ 24 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ನೌಕರರು 2ನೇ ಮದುವೆಯಾಗಲು ಬೇಕು ಇಲಾಖೆ ಅನುಮತಿ – ಇಲ್ಲವಾದ್ರೆ ಸರ್ಕಾರಿ ಸೌಲಭ್ಯವಿಲ್ಲ
ಶುಕ್ರವಾರ ಇದೇ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು ಗರ್ಭಪಾತವು ಮಗುವನ್ನು ಕೊಲ್ಲುವುದಕ್ಕೆ ಸಮಾನವಾಗಿರುತ್ತದೆ. ಮಗುವನ್ನು ಹೆತ್ತು, ದತ್ತು ಸ್ವೀಕಾರಕ್ಕೆ ಬಿಟ್ಟುಕೊಡಬಹುದು ಎಂದು ಪೀಠ ಸೂಚಿಸಿತ್ತು. ಮಗುವನ್ನು ಏಕೆ ಕೊಲ್ಲುತ್ತಿದ್ದೀರಿ? ಮಕ್ಕಳ ದತ್ತು ಪಡೆಯಲು ದೊಡ್ಡ ಸರತಿ ಸಾಲು ಇದೆ. ಮಗುವನ್ನು ಬೆಳೆಸಲು ಮಹಿಳೆಯನ್ನು ಒತ್ತಾಯಿಸುವುದಿಲ್ಲ. ಎಲ್ಲವನ್ನೂ ಸರ್ಕಾರ ಅಥವಾ ಆಸ್ಪತ್ರೆ ನೋಡಿಕೊಳ್ಳುತ್ತದೆ ಎಂದು ಸೂಚಿಸಲಾಗಿತ್ತು.