ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ (Unnao Rape Survivor) ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿಯಾದರು.
ಜರ್ಮನಿಯಿಂದ ವಾಪಸ್ ಆದ ರಾಹುಲ್ ಗಾಂಧಿ ಅವರನ್ನು ಅತ್ಯಾಚಾರ ಸಂತ್ರಸ್ತೆ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇದೇ ರೀತಿ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಬೇಕೆಂಬ ಆಕಾಂಕ್ಷೆಯನ್ನು ಸಂತ್ರಸ್ತೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ ಎಸ್‌ಐಟಿ ದಾಳಿ
ಪ್ರಕರಣದ ಆರೋಪಿ ಸೆಂಗಾರ್‌ಗೆ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಂಡಿಯಾ ಗೇಟ್ ಬಳಿಕ ಸಂತ್ರಸ್ತೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು. ಕೇಂದ್ರ ಅರೆಸೈನಿಕ ಪಡೆಗಳು ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದರು.
ಅರೆಸೈನಿಕ ಪಡೆ ಸಂತ್ರಸ್ತ ಮಹಿಳೆ ಮತ್ತು ಆಕೆಯ ತಾಯಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವುದನ್ನು ತಡೆದಿತ್ತು. ವೃದ್ಧ ತಾಯಿಯನ್ನು ಚಲಿಸುವ ಬಸ್ಸಿನಿಂದ ಜಿಗಿಯುವಂತೆ ಒತ್ತಾಯಿಸಿತ್ತು ಎಂಬ ಆರೋಪ ಕೇಳಿಬಂದಿದೆ.
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ವಿರೋಧಿಸಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಕೆಶಿ ವೈರಾಗ್ಯದ ಮಾತು

