Connect with us

Crime

ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

Published

on

– ಫಲಿಸಲಿಲ್ಲ ಚಿಕಿತ್ಸೆ, ಈಡೇರಲಿಲ್ಲ ಕೊನೆಯಾಸೆ

ಲಕ್ನೋ: ದುರುಳರ ಅಟ್ಟಹಾಸಕ್ಕೆ ಮತ್ತೊಂದು ಬಲಿಯಾಗಿದೆ. ದುಷ್ಟರು ಇಟ್ಟ ಬೆಂಕಿಯಲ್ಲಿ ಬೆಂದು ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾಳೆ. ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ. 11.40ಕ್ಕೆ ಕೊನೆಯುಸಿರೆಳೆದಿದ್ದಾಳೆ.

ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ 90 ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ ‘ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು’ ಎಂದು ಹೇಳಿಕೊಂಡಿದ್ದರು. ಹೈದ್ರಾಬಾದ್ ಎನ್‍ಕೌಂಟರ್‍ನಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದ ಬೆನ್ನಲ್ಲೇ ಈ ಆಘಾತಕಾರಿ ಬೆಳವಣಿಗೆಯಾಗಿದೆ.

ಬೆಂಕಿ ಹಚ್ಚಿದ್ರು: ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಬದುಕಲಿಲ್ಲ ಉನ್ನಾವೋ ಸಂತ್ರಸ್ತೆ!
ಡಿ.18, 2018 : 24 ವರ್ಷದ ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ
ಮಾ.5, 2019 : ಉನ್ನಾವೋದಲ್ಲಿ ಯುವತಿ ದೂರು
ಮಾ. 6, 2019 : ರಾಯ್‍ಬರೇಲಿಯಲ್ಲೂ ಸಂತ್ರಸ್ತೆ ದೂರು
ಸೆ. 2019: ಪ್ರಮುಖ ಆರೋಪಿ ಶುಭಂ ಪೊಲೀಸರಿಗೆ ಶರಣಾಗತಿ
ನ.30, 2019 : ಆರೋಪಿ ಶುಭಂಗೆ ನ್ಯಾಯಾಲಯದಿಂದ ಜಾಮೀನು
ಡಿ.5, 2019 : ಕೋರ್ಟ್‍ಗೆ ಹೋಗುತ್ತಿದ್ದಾಗ ಸಂತ್ರಸ್ತೆ ಮೇಲೆ ಹಲ್ಲೆ ಮಾಡಿ ಬೆಂಕಿ ಹಚ್ಚಿದ ಐವರು ಆರೋಪಿಗಳು, ಜೀವ ಉಳಿಸಿಕೊಳ್ಳಲು ಬೆಂಕಿ ಹಚ್ಚಿದ ಸ್ಥಳದಿಂದ 1 ಕಿ.ಮೀ ನಡೆದು ಬಂದಿದ್ದ ಯುವತಿ
ಡಿ.5, 2019 : ಮ್ಯಾಜಿಸ್ಟ್ರೇಟ್ ಬಳಿ ಆರೋಪಿಗಳ ಹೆಸರು ಹೇಳಿದ ಸಂತ್ರಸ್ತೆ (ಶುಭಂ ತ್ರಿವೇದಿ, ಶಿವಂ, ಹರಿಶಂಕರ್, ಉಮೇಶ್, ರಾಮಕಿಶೋರ್ ಆರೋಪಿಗಳು)
ಡಿ.6, 2019 : ಚಿಕಿತ್ಸೆ ಫಲಿಸದೆ ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಯಲ್ಲಿ ರಾತ್ರಿ 11.40ಕ್ಕೆ ಕೊನೆಯುಸಿರು.

Click to comment

Leave a Reply

Your email address will not be published. Required fields are marked *