ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜು.25) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಲಾಗಿದೆ.

ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ನಿರಂತರ ಮಳೆ – ಜು.25ರಂದು ಶಾಲಾ, ಕಾಲೇಜುಗಳಿಗೆ ರಜೆ
