ಚಾಮರಾಜನಗರ: ನಿನ್ನೆಯವರೆಗೂ ಕೂಡಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿ (BJP) ಎಂಬ ಪೋಸ್ಟರ್ (Poster) ಕೊಳ್ಳೇಗಾಲ (Kollegala) ಕ್ಷೇತ್ರದ ತುಂಬಾ ಹರಿದಾಡುತ್ತಿತ್ತು. ಆದರೆ ಬೆಳಗಾಗುವುದರೊಳಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಮ್ಮೆ ಕಾಂಗ್ರೆಸ್ (Congress) ಎಂಬ ಪೋಸ್ಟರ್ ಅಳವಡಿಸಲಾಗಿದೆ.
ರಾಜಕೀಯ ಮೇಲಾಟಕ್ಕೆ ಚಾಮರಾಜನಗರ (Chamarajanagara) ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ಸಾಕ್ಷಿಯಾಗಿದೆ. ಕೊಳ್ಳೇಗಾಲದ ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ (GN Nanjundaswamy) ಬಿಜೆಪಿಯಿಂದ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಉಪಾಧ್ಯಕ್ಷರು ಕೂಡಾ ಆಗಿರುವ ಜಿಎನ್ ನಂಜುಂಡಸ್ವಾಮಿ ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.
Advertisement
Advertisement
ನಂಜುಂಡಸ್ವಾಮಿ ಮಲ್ಲಿಕಾರ್ಜುನ ಖರ್ಗೆಯ ಆಪ್ತರಾಗಿದ್ದು ಕೂಡಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕೊಳ್ಳೇಗಾಲದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಹಾಲಿ ಶಾಸಕ ಎನ್ ಮಹೇಶ್ ಬೆಂಬಲಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಹೇಳಿದ್ದರು. ಇದರಿಂದ ಇನ್ನು ತಮಗೆ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂಬುದನ್ನು ಅರಿತು ನಂಜುಂಡಸ್ವಾಮಿ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಇದನ್ನೂ ಓದಿ: ಕುಮಾರಣ್ಣ ನನ್ನ ಹಿತೈಷಿ, ಬಿಜೆಪಿ ಬಂದರೆ ಸ್ವಾಗತ: ಪ್ರೀತಂ ಗೌಡ
Advertisement
Advertisement
ಈಗಾಗಲೇ ನಂಜುಂಡಸ್ವಾಮಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಮಾಜಿ ಶಾಸಕ ನಂಜುಂಡಸ್ವಾಮಿ ಸೇರಿದಂತೆ ನಾಲ್ವರು ಮಾಜಿ ಶಾಸಕರು ಕೂಡಾ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇದನ್ನೂ ಓದಿ: ಮಾಡಾಳ್ ಕುಟುಂಬದಿಂದ ಖತರ್ನಾಕ್ ಪ್ಲಾನ್- ಲೋಕಾಯುಕ್ತ ಬರುತ್ತೆ ಅಂತ ಸಿಸಿಟಿವಿ ಆಫ್!