ಮಂಗಳೂರು: ಎತ್ತಿನಹೊಳೆ ಯೋಜನೆ ವಿರುದ್ಧ ನೇತ್ರಾವತಿ ಸಂರಕ್ಷಣಾ ಸಮಿತಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಸತ್ಯಾಗ್ರಹದಲ್ಲಿ ಸಂಸದ ನಳಿನ್ ಕುಮಾರ್ ಸೇರಿದಂತೆ ಸರ್ವ ಧರ್ಮದ ಪ್ರಮುಖರು ಪಾಲ್ಗೊಂಡಿದ್ದಾರೆ.
ಸ್ವಾಮೀಜಿಗಳಾದ ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ, ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ, ಮೂಡುಬಿದಿರೆಯ ಚಾರುಕೀರ್ತಿ ಸ್ವಾಮೀಜಿ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ.
Advertisement
ಅವೈಜ್ಞಾನಿಕ ಎತ್ತಿನಹೊಳೆ ಯೋಜನೆಯನ್ನು ನಿಲ್ಲಿಸಬೇಕು, ಅಧ್ಯಯನ ಸಮಿತಿಯನ್ನು ನೇಮಿಸಬೇಕೆಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದಾರೆ. ಅಧಿವೇಶನ ನಡೆಯುತ್ತಿರುವುದರಿಂದ ಶಾಸಕರು ಯೋಜನೆ ವಿರುದ್ಧ ನಿಲುವಳಿ ಸೂಚನೆ ಮಂಡಿಸುವಂತೆ ಆಗ್ರಹಿಸಿದ್ದಾರೆ.
Advertisement
ಉಪವಾಸ ಆರಂಭಕ್ಕೂ ಮುನ್ನ ಗಾಂಧಿ ಪ್ರತಿಮೆ ಬಳಿಯಿಂದ ಬೃಹತ್ ಮೆರವಣಿಗೆ ನಡೆಯಿತು. ಹೋರಾಟಗಾರರು, ಸ್ವಾಮೀಜಿಗಳು, ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Advertisement
ಹೋರಾಟಗಾರರ ಬಂಧನ: ಎತ್ತಿನಹೊಳೆ ಯೋಜನೆ ವಿರೋಧಿ ಪ್ರತಿಭಟನೆ ನಡೆಸಿದ್ದಕ್ಕೆ ಸಂಸದ ನಳಿನ್ ಕುಮಾರ್ ಸೇರಿದಂತೆ 50 ಮಂದಿಯನ್ನು ಬಲವಂತವಾಗಿ ಪೊಲೀಸರು ಬಂಧಿಸಿದ್ದಾರೆ.
Advertisement
ಬಜೆಟ್ ದಿನ ಬಂದ್: ರಾಜ್ಯ ಸರಕಾರ ಸ್ಪಂದಿಸದಿದ್ದರೆ ಕರ್ನಾಟಕದ ಬಜೆಟ್ ಮಂಡನೆ ದಿವಸವೇ ದಕ್ಷಿಣಕನ್ನಡ ಜಿಲ್ಲೆಯನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ನೇತ್ರಾವತಿ ಸಂರಕ್ಷಣಾ ಸಮಿತಿ ಎಚ್ಚರಿಕೆ ನೀಡಿದೆ.