ಕೊಪ್ಪಳ: 10 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ 101 ಜನರನ್ನು ತಪ್ಪಿತಸ್ಥರು ಎಂದು ನ್ಯಾಯಾಲಯ ಇಂದು (ಅ.22) ತೀರ್ಪು ನೀಡಿದೆ.
ಅಸ್ಪೃಶ್ಯತೆ ಆಚರಣೆಯ ಹಿನ್ನೆಲೆಯಲ್ಲಿ 10 ವರ್ಷಗಳ ಹಿಂದೆ ನಡೆದ ಗಲಭೆಯಲ್ಲಿ ಭಾಗಿಯಾದ 101 ಜನರ ವಿರುದ್ಧ ಆರೋಪ ಸಾಬೀತಾಗಿದ್ದು, ಅ.24ರಂದು ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.ಇದನ್ನೂ ಓದಿ: ಸ್ಟೈಲೀಶ್ ಆಗಿ ಸೀರೆಯುಟ್ಟು ಹಾಟ್ ಆಗಿ ಕಾಣಿಸಿಕೊಂಡ ನಿಶ್ವಿಕಾ ನಾಯ್ಡು
Advertisement
Advertisement
2014ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹೊಟೇಲ್ ಹಾಗೂ ಕ್ಷೌರದ ಅಂಗಡಿಯನ್ನು ಧ್ವಂಸ ಮಾಡಿದ್ದರು. ಜೊತೆಗೆ ದಲಿತ ಕೇರಿಯ 4 ಗುಡಿಸಲುಗಳನ್ನು ಸುಟ್ಟು ಹಾಕಿದ್ದರು. ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ದಲಿತರ ಮೇಲೆಯೂ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಘಟನೆಯಲ್ಲಿ ಭಾಗಿಯಾದ 117 ಜನರಲ್ಲಿ 101 ಜನರ ಮೇಲಿನ ಆರೋಪ ಸಾಬೀತಾಗಿದೆ. ಇದರಿಂದಾಗಿ ಭಾರಿ ಪ್ರಮಾಣದಲ್ಲಿ ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.
Advertisement
ಈ ಪ್ರಕರಣದ ವಿಚಾರಣೆ ನಡೆಸಿದ ಕೊಪ್ಪಳ (Koppala) ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕರಣದ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದ್ದಾರೆ. ಅದರಲ್ಲಿ ಕೆಲವರು ಸಾವನ್ನಪ್ಪಿದ್ದು, 101 ಜನರು ಮಾತ್ರ ಜೀವಂತವಾಗಿದ್ದಾರೆ. ಅವರಲ್ಲಿ ನ್ಯಾಯಲಯಕ್ಕೆ ಹಾಜರಾಗಿದ್ದ 100 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಅಸ್ಪೃಶ್ಯತೆಯ ಕಾರಣಕ್ಕೆ ಶಿಕ್ಷೆಯಾಗುತ್ತಿರುವುದು ಇದು ದೊಡ್ಡ ಪ್ರಕರಣವಾಗಿದೆ ಎಂದು ಅಭಿಯೋಜಕರು ತಿಳಿಸಿದ್ದಾರೆ.
Advertisement
ಕೆಲವರು ಮಾಡಿರುವ ದೌರ್ಜನ್ಯದಿಂದಾಗಿ ಈಗ ಗ್ರಾಮದ ಕೆಲವು ಅಮಾಯಕರು ಶಿಕ್ಷೆ ಅನುಭವಿಸುವಂತಾಗಿದೆ. ದಲಿತರ ಮೇಲಿನ ದೌರ್ಜನ್ಯಕ್ಕೆ ಈಗ ಶಿಕ್ಷೆಯಾಗುತ್ತಿದೆ. ನ್ಯಾಯಲಯದ ತೀರ್ಪಿಗೆ ಎಲ್ಲರೂ ಬದ್ಧರಾಗಿರಬೇಕು. ಮುಂದಿನ ದಿನಗಳಲ್ಲಿ ಅಮಾಯಕರು ಹೊರಬರಲಿ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಅ.24 ರಂದು ನ್ಯಾಯಾಧೀಶರು ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದು, ತೀರ್ಪಿನ ಬಗ್ಗೆ ಕುತೂಹಲವಿದೆ.ಇದನ್ನೂ ಓದಿ: ದೃಶ್ಯ ಸಿನಿಮಾ ಮಾದರಿಯಲ್ಲಿ ಗೆಳತಿಯ ಹತ್ಯೆ – ಯೋಧ ಅರೆಸ್ಟ್