ಲಕ್ನೋ: ರಕ್ಷಾಬಂಧನ ಹಿನ್ನೆಲೆ ಈ ಬಾರಿ ರಾಜ್ಯದ ಮಹಿಳೆಯರಿಗೆ 48 ಗಂಟೆಗಳ ಕಾಲ ಉಚಿತ ಬಸ್ ಪ್ರಯಾಣ ಸೇವೆಯನ್ನು ಒದಗಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
Advertisement
ರಕ್ಷಾಬಂಧನ ಸಮಯದಲ್ಲಿ ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್‍ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ರಾಮ ಭಕ್ತರನ್ನು ಅಪಮಾನಿಸಲೆಂದೇ ಕಾಂಗ್ರೆಸ್ ಪ್ರತಿಭಟಿಸಿದೆ – ರಾಮಮಂದಿರಕ್ಕೆ ನಂಟು ಕಲ್ಪಿಸಿದ ಅಮಿತ್ ಶಾ, ಯೋಗಿ
Advertisement
Advertisement
ಆಗಸ್ಟ್ 10ರ ಮಧ್ಯರಾತ್ರಿಯಿಂದ ಆಗಸ್ಟ್ 12ರ ಮಧ್ಯರಾತ್ರಿಯವರೆಗೆ ಮಹಿಳೆಯರು 48 ಗಂಟೆಗಳ ಕಾಲ ಉಚಿತವಾಗಿ ಪ್ರಯಾಣಿಸಬಹುದು ಎಂದು ರಾಜ್ಯದ ಮುಖ್ಯಸ್ಥರು ತಿಳಿಸಿದ್ದಾರೆ. ಆಜಾದಿ ಕಾ ಅಮೃತ್ ಮಹೋತ್ಸವವನ್ನು ಗುರುತಿಸುವ ಉದ್ದೇಶದಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಮತ್ತು 48 ಗಂಟೆಗಳ ಅವಧಿಗೆ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ- ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆ