ಲಕ್ನೋ: ಜನವರಿ 22 ರಂದು ರಾಮಮಂದಿರದ (Ram Mandir) ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೆ ಕೆಲವೇ ದಿನಗಳಿವೆ. ಈ ಹೊತ್ತಲ್ಲೇ ಗುರುವಾರ ಅಯೋಧ್ಯೆಯಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಗುರುವಾರ ಮಾತನಾಡಿ, ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ಹಿನ್ನೆಲೆ ಹೈಅಲರ್ಟ್ – ಜ.22ರಂದು ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಜೆ ಇಲ್ಲ..?
Advertisement
Advertisement
ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯ ಮೇರೆಗೆ ನಡೆಸುತ್ತಿರುವ ತಪಾಸಣೆ ಅಭಿಯಾನದ ಭಾಗವಾಗಿ, ಅಯೋಧ್ಯೆ ಜಿಲ್ಲೆಯ ಯುಪಿ-ಎಟಿಎಸ್‌ನಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಜಿಪಿ ಕುಮಾರ್ ತಿಳಿಸಿದ್ದಾರೆ.
Advertisement
Advertisement
ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬೆಳಕಿಗೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ. ಉತ್ತರ ಪ್ರದೇಶ ಸರ್ಕಾರವು ಡ್ರೋನ್‌ಗಳ ಮೂಲಕ ಕಣ್ಗಾವಲು ಹೆಚ್ಚಿಸಿದ್ದು, ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ. ಇದನ್ನೂ ಓದಿ: ಅಯೋಧ್ಯೆ ಗರ್ಭಗುಡಿ ಪೀಠದಲ್ಲಿ ಬಾಲರಾಮ – ಮೊದಲ ಚಿತ್ರ ವೈರಲ್