ಗಾಂಧಿನಗರ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದರು.
ಪ್ರಯಾಗ್‍ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ವಿರುದ್ಧ ಓವೈಸಿ ವಾಗ್ದಾಳಿ ನಡೆಸಿದರು. ಗುಜರಾತ್‍ನ ಕಚ್‍ನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಯುಪಿ ಸಿಎಂ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಅವರು ಯಾರನ್ನಾದರೂ ಅಪರಾಧಿ ಎಂದು ಘೋಷಿಸುತ್ತಾರೆ. ಅವರ ಮನೆಗಳನ್ನು ಕೆಡವುತ್ತಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಡ್ರಗ್ಸ್ ಕೇಸ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ, ನಟ ಸಿದ್ಧಾಂತ್ ಕಪೂರ್ ಬಂಧನ
Advertisement
Advertisement
ಪ್ರಯಾಗ್‍ರಾಜ್‍ನಲ್ಲಿ ಜೂನ್ 10 ರಂದು ನಡೆದ ಹಿಂಸಾಚಾರದ ಸಂಚುಕೋರ ಜಾವೇದ್ ಮೊಹಮ್ಮದ್ ಅಲಿಯಾಸ್ ಪಂಪ್ ಅವರ ಮನೆಯನ್ನು ಪೊಲೀಸ್ ನಿಯೋಜನೆಯ ನಡುವೆ ಪ್ರಯಾಗ್‍ರಾಜ್ ಅಭಿವೃದ್ಧಿ ಪ್ರಾಧಿಕಾರ(ಪಿಡಿಎ) ಭಾನುವಾರ ನೆಲಸಮಗೊಳಿಸಿದೆ.
Advertisement
Advertisement
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡೆ ಮತ್ತು ಕಾರ್ಯಕರ್ತೆ ಅಫ್ರೀನ್ ಫಾತಿಮಾ ಅವರು ಕಳೆದ ವರ್ಷ ಕೇಂದ್ರದ ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫಾತಿಮಾ ಪಾತ್ರವಿದೆ ಎಂದು ಆಕೆಯ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಈ ಕಾರಣಗಳಿಂದ ಓವೈಸಿ ಅವರು ಯೋಗಿ ಆದಿತ್ಯನಾಥ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ದಿನಗೂಲಿ ನೌಕರರ ಮಕ್ಕಳಿಗಾಗಿ ಬಿಬಿಎಂಪಿಯಿಂದ ರಾತ್ರಿ ಸ್ಕೂಲ್