– ನಾಳೆ ಹರಿದ್ವಾರದಲ್ಲಿ ಅಂತ್ಯಕ್ರಿಯೆ; ಗಣ್ಯರಿಂದ ಸಂತಾಪ
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (UP CM) ಅವರ ತಾಯಿ ಸಾವಿತ್ರಿ ದೇವಿ (91) ಅವರು ಇಂದು ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಪಂಚೂರ್ ಗ್ರಾಮದಲ್ಲಿರುವ ತಮ್ಮ ಸ್ವಗೃಹದಲ್ಲಿ ಸಾವಿತ್ರಿ ದೇವಿ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್ ಕೂಡ ಹಲವು ಬಾರಿ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದರು. ನಾಳೆ ಶನಿವಾರ ಹರಿದ್ವಾರದಲ್ಲಿ ಅವರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.ಇದನ್ನೂ ಓದಿ: ಸಂಪುಟ ವಿಸ್ತರಣೆಗೆ ‘ಪಕ್ಷ ಸಂಘಟನೆ’ಯ ಚೆಕ್ಮೇಟ್: ಸಿಎಂಗೆ ಜಂಟಿ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸಿದ್ದು, ಹರಿಪ್ರಸಾದ್!
ಯೋಗಿ ಆದಿತ್ಯನಾಥ್ ಅವರ ತಾಯಿಯ ನಿಧನಕ್ಕೆ ದೇಶದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಹಾಗೂ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಪಂಕಜ್ ಚೌಧರಿ ಸೇರಿದಂತೆ ಅನೇಕ ನಾಯಕರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ʻಕಾವೇರಿʼ ಆಘಾತ – ನಿತ್ಯ 2,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
