ಲಕ್ನೋ: ಪೊಲೀಸ್ ಪೇದೆಯೊಬ್ಬರು ಪೊಲೀಸ್ ಮೆಸ್‍ನಲ್ಲಿ ನೀಡಲಾದ ಆಹಾರ ಗುಣಮಟ್ಟದ್ದಲ್ಲ ಎಂದು ರಸ್ತೆಯ ಮೇಲೆ ನಿಂತು ಗಳಗಳನೇ ಅಳುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಉತ್ತರಪ್ರದೇಶದ ಕಾನ್‍ಸ್ಟೇಬಲ್‍ನನ್ನು ಮನೋಜ್ ಕುಮಾರ್ ಎಂದು ಗುರುತಿಸಲಾಗಿದೆ. ವೀಡಿಯೋದಲ್ಲಿ ಮನೋಜ್ ಕುಮಾರ್ ರೊಟ್ಟಿ, ದಾಲ್ ಹಾಗೂ ಅನ್ನವನ್ನು ತಟ್ಟೆಯನ್ನು ಹಿಡಿದು ಈ ಊಟವನ್ನು ಪ್ರಾಣಿಗಳು ಸಹ ತಿನ್ನುವುದಿಲ್ಲ ಎಂದು ರಸ್ತೆಯಲ್ಲಿ ಅಳುತ್ತಿದ್ದಾರೆ. ಅಲ್ಲಿದ್ದ ಹಿರಿಯ ಅಧಿಕಾರಿಯೊಬ್ಬರು ಮನೋಜ್ ಕುಮಾರ್‌ನನ್ನು ಮತ್ತೆ ಪೊಲೀಸ್ ಠಾಣೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಜೊತೆಗೆ ಅವರನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ.
Advertisement
Advertisement
ಆಹಾರದ ಬಗ್ಗೆ ತಮ್ಮ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಷ್ಟೇ ಅಲ್ಲದೇ ನನ್ನನ್ನು ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದಾರಿಹೋಕರ ಬಳಿ ಮನೋಜ್ ಕುಮಾರ್ ಅಳಲು ತೋಡಿಕೊಂಡಿದ್ದಾರೆ.
Advertisement
ಪೊಲೀಸ್ ಅಧಿಕಾರಿಗಳಿಗೆ ಪೌಷ್ಟಿಕ ಆಹಾರ ನೀಡಲು ರಾಜ್ಯಸರ್ಕಾರ ಭತ್ಯೆ ನೀಡುತ್ತಿದೆ ಎಂದು ಯೋಗಿ ಆದಿತ್ಯನಾಥ್ ಈ ಹಿಂದೆ ಘೋಷಿಸಿದ್ದರು. ಆದರೂ ನಮಗೆ ಪೌಷ್ಟಿಕ ಆಹಾರ ಸಿಗುತ್ತಿಲ್ಲ. ನಾವು ಸರಿಯಾದ ಆಹಾರವನ್ನು ಪಡೆಯದಿದ್ದರೆ, ಸರಿಯಾಗಿ ಕೆಲಸ ನಿರ್ವಹಿಸಲು ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸೇನಾ ಶಿಬಿರದೊಳಗೆ ನುಗ್ಗಲು ಯತ್ನಿಸಿದ್ದ ಇಬ್ಬರು ಉಗ್ರರ ಹತ್ಯೆ- ಮೂವರು ಯೋಧರು ಹುತಾತ್ಮ
Advertisement
मैस के खाने की गुणवत्ता से सम्बन्धित शिकायती ट्वीट प्रकरण में खाने की गुणवत्ता सम्बन्धी जांच सीओ सिटी कर रहे है।
उल्लेखनीय है कि उक्त शिकायतकर्ता आरक्षी को आदतन अनुशासनहीनता, गैरहाजिरी व लापरवाही से सम्बन्धित 15 दण्ड विगत वर्षो में दिये गये है । @Uppolice @dgpup @adgzoneagra
— Firozabad Police (@firozabadpolice) August 10, 2022
ಈ ಬಗ್ಗೆ ಫಿರೋಜಾಬಾದ್ ಪೊಲೀಸರು ಟ್ವೀಟ್ ಮಾಡಿದ್ದು, ಕಾನ್‍ಸ್ಟೇಬಲ್ ಮನೋಜ್‍ಕುಮಾರ್ ಶಿಸ್ತಿನ ಸಮಸ್ಯೆಯ ಇತಿಹಾಸವನ್ನೇ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ 15 ಬಾರಿ ಶಿಕ್ಷೆಗೆ ಒಳಗಾಗಿದ್ದರು ಎಂದು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆಯರಿಗೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ – ಅರ್ಹತೆ ಏನು? ಪರೀಕ್ಷೆ ಹೇಗಿರುತ್ತೆ?