ಲಕ್ನೋ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ 2018 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೀಡಿದ್ದ ಹೇಳಿಕೆಗಳ ವಿರುದ್ಧ ಬಿಜೆಪಿ ನಾಯಕರೊಬ್ಬರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ (Defamation Case) ಉತ್ತರ ಪ್ರದೇಶದ (Uttar Pradesh) ಸುಲ್ತಾನ್‍ಪುರದ ಸ್ಥಳೀಯ ನ್ಯಾಯಾಲಯ (Court) ಅವರಿಗೆ ಜಾಮೀನು ನೀಡಿದೆ.
Advertisement
ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಬಿಜೆಪಿ (BJP) ತನ್ನ ರಾಜಕೀಯ ಶುದ್ಧವಾಗಿದೆ ಎಂದು ಹೇಳಿಕೊಂಡಿದ್ದರೂ, ಕೊಲೆ ಪ್ರಕರಣದ ಆರೋಪಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಹೊಂದಿದೆ ಎಂದಿದ್ದರು. ಆಗ ಅಮಿತ್ ಶಾ ಬಿಜೆಪಿ ಅಧ್ಯಕ್ಷರಾಗಿದ್ದರು. ಈ ವಿಚಾರವಾಗಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ಮಾರ್ಚ್ ತಿಂಗಳಲ್ಲಿ ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಒಡವೆ ಹಸ್ತಾಂತರ: ಕೋರ್ಟ್‌ನಿಂದ ದಿನಾಂಕ ನಿಗದಿ
Advertisement
Advertisement
2014 ರಲ್ಲಿ ವಿಶೇಷ ಸಿಬಿಐ ನ್ಯಾಯಾಲಯದಿಂದ ಅಮಿತ್ ಶಾ ಅವರನ್ನು ಬಿಡುಗಡೆ ಮಾಡಿದ ಸೊಹ್ರಾಬುದ್ದೀನ್ ಎನ್‍ಕೌಂಟರ್ ಪ್ರಕರಣವನ್ನು ರಾಹುಲ್ ಉಲ್ಲೇಖಿಸಿದ್ದರು.
Advertisement
ಇಂತಹ ಆಕ್ಷೇಪಾರ್ಹ ಹೇಳಿಕೆಗಳು ಅಮಿತ್ ಶಾ ಅವರ ವರ್ಚಸ್ಸಿಗೆ ಕಳಂಕ ತಂದಿದೆ ಎಂದು ಮಿಶ್ರಾ ದೂರಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಸುಲ್ತಾನ್‍ಪುರದ ಸ್ಥಳೀಯ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ ಜಾಮೀನು ನೀಡಿದೆ. ಇದನ್ನೂ ಓದಿ: ರಾಕ್‌ಲೈನ್ ಮಾಲ್‌ಗೆ ಹಾಕಿರುವ ಸೀಲ್ ಕೂಡಲೇ ತೆಗೆಯಿರಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ