ಲಕ್ನೋ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಭಯೋತ್ಪಾದನೆಯನ್ನು ಹರಡಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ವಿಧಾನಸಭಾ ಮೂರನೇ ಹಂತದ ಚುನಾವಣೆಗೂ ಮುನ್ನ ಪ್ರಚಾರ ನಡೆಸಿದ ಅವರು, ತಾವು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಬ್ಬರೂ ಕೂಡ ರಾಜ್ಯದಲ್ಲಿ ಮತ್ತೆ ಗೆದ್ದರೆ ಬಿಜೆಪಿ ಪ್ರತಿ ವರ್ಷ ಎರಡು ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ನೀಡಲಿದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: 40 ವರ್ಷಗಳ ನಂತರ ಭಾರತದಲ್ಲಿ ಮತ್ತೆ IOC ಅಧಿವೇಶನ
Advertisement
Advertisement
ಬಂದಾ ಜಿಲ್ಲೆಯ ತಿಂದವಾರಿ ವಿಧಾನಸಭೆ ಕ್ಷೇತ್ರದಲ್ಲಿ ಸಾರ್ವಜನಿಕರನ್ನುದ್ದೇಶಿ ಮಾತನಾಡಿದ ಅವರು, ಸೈಕಲ್ ಸರ್ಕಾರ (ಸಮಾಜವಾದಿ ಪಕ್ಷದ ಚಿಹ್ನೆ) ಅಧಿಕಾರಕ್ಕೆ ಬಂದರೆ, ಉತ್ತರ ಪ್ರದೇಶವು ದೇಶಾದ್ಯಂತ ಭಯೋತ್ಪಾದನೆಯನ್ನು ಹರಡಿಸುತ್ತದೆ. ಈ ಮುನ್ನ ಅಖಿಲೇಶ್ ನೇತೃತ್ವದ ಸರ್ಕಾರದಲ್ಲಿ 2,000 ರೈತರು ಹಸಿವಿನಿಂದ ಸತ್ತಿದ್ದರು. ಆದರೆ ತಮ್ಮ ಮತ್ತು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ ಎರಡು ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ಮತ್ತು ಹೋಳಿ, ದೀಪಾವಳಿ ಸಮಯದಲ್ಲಿ ಪದವಿ ಓದುತ್ತಿರುವ ಯುವತಿಯರಿಗೆ ಸ್ಕೂಟಿ ನೀಡುತ್ತೇವೆ ಎಂದು ಹೇಳಿದ್ದಾರೆ.
Advertisement
Advertisement
ಮತ್ತೊಂದೆಡೆ ಮುಖ್ಯಮಂತ್ರಿ ಯೋಗಿ ಆದಿಯಾನಾಥ್ ನೇತೃತ್ವದಲ್ಲಿ ರಾಯ್‍ಬರೇಲಿಯ ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡಿದ ಅವರು, ಉತ್ತರ ಪ್ರದೇಶದಲ್ಲಿ ಇನ್ನು ಮುಂದೆ ಬಾಹುಬಲಿಗಳಿಲ್ಲ. ಭಜರಂಗಬಲಿ ಮಾತ್ರ ಇದೆ. ವಿರೋಧ ಪಕ್ಷಗಳು (ಎಸ್‍ಪಿ, ಬಿಎಸ್‍ಪಿ ಮತ್ತು ಕಾಂಗ್ರೆಸ್) ಬಡವರ ಹೆಸರಿನಲ್ಲಿ ಮತಗಳನ್ನು ತೆಗೆದುಕೊಳ್ಳುತ್ತಿವೆ. ಆದರೆ ನರೇಂದ್ರ ಮೋದಿ ಅವರನ್ನು ಹೊರತುಪಡಿಸಿ ಯಾವುದೇ ಪ್ರಧಾನಿ ಬಡವರಿಗೆ ಒಳ್ಳೆಯದನ್ನು ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ವಿರಾಟ್ ಅಭಿಮಾನಿಗಳಿಗಿಲ್ಲ ಗಡಿರೇಖೆ – ಪಾಕ್ ಕ್ರಿಕೆಟ್ ಲೀಗ್‍ನಲ್ಲಿ ರಾರಾಜಿಸಿದ ಕೊಹ್ಲಿ ಪೋಸ್ಟರ್
ಕೆಲವು ದಿನಗಳ ಹಿಂದೆ ಅಖಿಲೇಶ್ ಯಾದವ್ ಕಾನೂನು ಸುವ್ಯವಸ್ಥೆಯಲ್ಲಿ ಏನಾಗಿದೆ ಎಂದು ಕೇಳಿದ್ದರು. ಇದಕ್ಕೆ ಬಿಜೆಪಿ ಯಾರ ಕನ್ನಡಕ ಹಳದಿಯಾಗಿದೆಯೋ ಅವರು ಹಳದಿ ಬಣ್ಣವನ್ನು ನೋಡುತ್ತಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ 72% ದರೋಡೆ, 62% ಕಳ್ಳತನ, 31% ಕೊಲೆ, 29% ಅಪಹರಣ, 50% ಅತ್ಯಾಚಾರ ಕಡಿಮೆಯಾಗಿದೆ ಎಂದು ಟ್ವೀಟ್ ಮಾಡಿದೆ.