ಲಕ್ನೋ: ಲಖಿಂಪುರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನಿಗೆ ಜಾಮೀನು ನೀಡಿರುವುದನ್ನು ಖಂಡಿಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್ ಅವರು, ತಾವು ಅಧಿಕಾರಕ್ಕೆ ಬಂದರೆ ಅಪರಾಧಿಗಳನ್ನು ಹಾಗೂ ಅಪರಾಧಿಗಳ ರಕ್ಷಕರನ್ನು ಜೈಲಿಗೆ ಕಳಿಸುವುದಾಗಿ ಭರವಸೆ ನೀಡಿದರು.
ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ರೈತರನ್ನು ತುಳಿದ ಸಚಿವರ ಮಗನಿಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ಸರ್ಕಾರವು ಪ್ರಕರಣದ ತನಿಖೆಯನ್ನು ಸರಿಯಾದ ರೀತಿಯಲ್ಲಿ ಮುಂದುವರಿಸಿಲ್ಲ. ಆದರೆ ನಮ್ಮ ಸರ್ಕಾರ ಬಂದಾಗ ರೈತರ ಜೀವವನ್ನು ತೆಗೆದುಕೊಂಡ ಆರೋಪಿಗಳಿಗೆ ಮಾತ್ರವಲ್ಲದೇ ಅವರನ್ನು ರಕ್ಷಿಸಿದವರನ್ನು ಬಂಧಿಸಲಾಗುವುದು. ಜೊತೆ ಪ್ರಕರಣದ ಕುರಿತು ಸರಿಯಾಗಿ ತನಿಖೆ ನಡೆಸಲಾಗುವುದು ಎಂದ ಅವರು, ಕಾನೂನನ್ನು ತಮ್ಮ ಕೈಯಲ್ಲಿ ತೆಗೆದುಕೊಳ್ಳಲು ಬಯಸುವವರು ಮುಂಬರುವ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕುವ ಅಗತ್ಯವಿಲ್ಲ ಎಂದು ನುಡಿದರು.
Advertisement
Advertisement
ನವ ಉತ್ತರಪ್ರದೇಶಕ್ಕೆ ಸಮಾಜವಾದಿ ಪಕ್ಷಕ್ಕೆ ಮತ ಕೇಳಿದ ಅವರು, ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು ಮಾಡುವುದರ ಜೊತೆಗೆ ಇನ್ನೂ ಕೆಲವು ಪೊಲೀಸ್ ಹುದ್ದೇಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದರು. ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಂತೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದಾಗಿ ಈಗಾಗಲೇ ಭರವಸೆ ನೀಡಿರುವ ಅವರು, ಉದ್ಯೋಗ ಪಡೆಯಲು ವಯೋಮಿತಿ ಸಡಿಲಿಸುವ ಭರವಸೆ ನೀಡಿ ನಿರುದ್ಯೋಗಿ ಯುವಕರನ್ನು ಓಲೈಸಲು ಯತ್ನಿಸಿದರು. ಇದನ್ನೂ ಓದಿ: ಪುಟ್ಟ ಕಂದಮ್ಮನೊಂದಿಗೆ ಪತಿಯನ್ನು ಹುಡುಕುತ್ತಾ ಕಾಡಿಗೆ ತೆರಳಿದ ಪತ್ನಿ..!
Advertisement
Advertisement
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ನಾಲ್ವರು ಲಖಿಂಪುರದ ಖೇರಿಯ ಎಂಟು ಜನರ ಸಾವಿಗೆ ಕಾರಣವಾದ ಆರೋಪಿಯಾಗಿದ್ದಾರೆ. ಆಶಿಶ್ ಮಿಶ್ರಾ ಅವರಿಗೆ ಇತ್ತೀಚೆಗೆ ಜಾಮೀನು ನೀಡಲಾಯಿತು ಮತ್ತು ಕಳೆದ ವರ್ಷ ಅಕ್ಟೋಬರ್‍ನಲ್ಲಿ ಅವರನ್ನು ಬಂಧಿಸಿದ ನಂತರ ಲಖಿಂಪುರ ಖೇರಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್