ಲಕ್ನೋ: ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಪರವಾಗಿ ಮಮತಾ ಬ್ಯಾನರ್ಜಿ ಪ್ರಚಾರ ನಡೆಸುತ್ತಿದ್ದಾರೆ. ಗುರುವಾರ ವಾರಣಾಸಿಯಲ್ಲಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ
ಈ ಹಿಂದೆಯೂ ನನ್ನ ಮೇಲೆ ಹಲವಾರು ಬಾರಿ ದಾಳಿ ನಡೆದಿದೆ. ದೊಣ್ಣೆಯಿಂದ ಹೊಡೆದಿದ್ದಾರೆ. ಆದರೆ ನಾನು ಎಂದಿಗೂ ತಲೆ ಬಾಗಿಲ್ಲ. ನಾನು ಹೇಡಿಯಲ್ಲ, ಹೋರಾಟಗಾರ್ತಿ ಎಂದು ತಿಳಿಸಿದ್ದಾರೆ.
ನಾನು ವಾರಣಾಸಿಗೆ ಬಂದಾಗ ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬೆಳವಣಿಗೆ ಬಿಜೆಪಿ ಅಧಿಕಾರ ಕಳೆದುಕೊಳ್ಳುವುದನ್ನು ಸೂಚಿಸುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನವಾಬ್ ಮಲಿಕ್ ED ಕಸ್ಟಡಿ ಅವಧಿ ವಿಸ್ತರಣೆ – ಮಾ. 7ರವರೆಗಿಲ್ಲ ಬಿಡುಗಡೆ ಭಾಗ್ಯ
ಸಮಾಜವಾದಿ ಪಕ್ಷದ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದ ಬ್ಯಾನರ್ಜಿ ಅವರು ಬಲಪಂಥೀಯ ಗುಂಪು, ಹಿಂದೂ ಯುವ ವಾಹಿನಿಯ ಪ್ರತಿಭಟನೆ ಬಿಸಿ ಎದುರಿಸಿದರು. ಸುಮಾರು ಎರಡು ದಶಕಗಳ ಹಿಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಾಪಿಸಿದ ಬಲಪಂಥೀಯ ಗುಂಪಿನ ಸದಸ್ಯರು, ಗಂಗಾ ಆರತಿಯಲ್ಲಿ ಪಾಲ್ಗೊಳ್ಳಲು ದಶಾಶ್ವಮೇಧ ಘಾಟ್‌ಗೆ ಪ್ರಯಾಣಿಸುತ್ತಿದ್ದಾಗ ಮಮತಾ ಬ್ಯಾನರ್ಜಿ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದ್ದರು.