ಲಕ್ನೋ: ಯಾರೇ ಆದರೂ ಹಿಜಬ್ ಮುಟ್ಟಲು ಬಂದರೆ ಅವರ ಕೈಯನ್ನು ಕತ್ತರಿಸುವುದಾಗಿ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಖಾನಮ್ ಎಚ್ಚರಿಸಿದರು.
ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಬ್ ಧರಿಸಲು ನಿರಾಕರಿಸಿರುವುದನ್ನು ವಿರೋಧಿಸಿದ ಅವರು, ಹೆಣ್ಣುಮಕ್ಕಳ ಘನತೆಯೊಂದಿಗೆ ಆಟ ಆಡಲು ಬಂದರೆ ಅವರು ಝಾನ್ಸಿ ರಾಣಿ, ರಜಿಯಾ ಸುಲ್ತಾನ್‍ರಂತೆ ಹಿಜಬ್ ಮುಟ್ಟಲು ಬಂದ ಕೈಗಳನ್ನು ಕತ್ತರಿಸಲಾಗುವುದು. ಯಾವುದೇ ಸರ್ಕಾರ ಅಧಿಕಾರದಲ್ಲಿ ಇರಲಿ ಮಹಿಳೆಯರನ್ನು ದುರ್ಬಲರು ಎಂದು ಭಾವಿಸಬಾರದು ಎಂದರು.
Advertisement
Advertisement
ಭಾರತವು ವೈವಿಧ್ಯತೆಯಿಂದ ಕೂಡಿದ ದೇಶವಾಗಿದೆ. ಇಲ್ಲಿ ಒಬ್ಬ ವ್ಯಕ್ತಿಯು ಹಣೆಯ ಮೇಲೆ ತಿಲಕವನ್ನು ಹೊಂದಿದ್ದಾನೆಯೇ ಅಥವಾ ಟೋಪಿ ಧರಿಸಿದ್ದಾರೆಯೇ ಅಥವಾ ಹಿಜಬ್ ಧರಿಸಿದ್ದಾರೆಯೆ ಎನ್ನುವುದು ಮುಖ್ಯವಲ್ಲ. ಎಲ್ಲಾ ಧರ್ಮದವರ ಸಂಪ್ರದಾಯವನ್ನು ಗೌರವಿಸಬೇಕು ಎಂದ ಅವರು, ಘುಂಘಾಟ್ ಮತ್ತು ಹಿಜಬ್ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗಗಳು. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಮೂಲಕ ವಿವಾದ ಸೃಷ್ಟಿಸುವುದು ಭಯಾನಕವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಂವಿಧಾನದ ಆಶಯದಲ್ಲಿ ದೇಶ ಮುನ್ನಡೆಸಲಾಗ್ತಿದೆ, ಷರಿಯಾ ಕಾನೂನಿನಿಂದಲ್ಲ: ಹಿಜಬ್ ಕುರಿತು ಯೋಗಿ ಪ್ರತಿಕ್ರಿಯೆ
Advertisement
Advertisement
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ 7ಹಂತದಲ್ಲಿ ನಡೆಯಲಿದ್ದು, ಮಾರ್ಚ್ 7ರಂದು ಮುಕ್ತಾಯಗೊಳ್ಳಲಿದೆ. ಮಾರ್ಚ್ 10ರಂದು ಮತಗಳ ಎಣಿಕೆ ನಡೆಯಲಿದೆ. ಈಗಾಗಲೇ ಸಮಾಜವಾದಿ ಪಕ್ಷ ಹಾಗೂ ಬಿಜೆಪಿ ಪ್ರಬಲ ಪೈಪೋಟಿಯಲ್ಲಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದಕ್ಕೆ ಸಂಬಂಧಿಸಿ ಈಗಾಗಲೇ ಅನೇಕ ರಾಜಕೀಯ ನಾಯಕರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್, ರಾಘವ್ ಚಡ್ಡಾ ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಣ್‍ಜಿತ್ ಸಿಂಗ್ ಚನ್ನಿ