ಅರಮನೆಯಲ್ಲಿ ಐಷಾರಾಮಿ ಜೀವನ ನಡೆಸುವ ರಾಜವಂಶಸ್ಥರಿಗೆ ಬಡವರ ಕಷ್ಟ ಅರ್ಥವಾಗಲ್ಲ: ಮೋದಿ

Public TV
1 Min Read
narendra modi 3

ಲಕ್ನೋ: ರಾಜವಂಶಸ್ಥರು ಅರಮನೆಗಳಲ್ಲಿ ವೈಭೋಗದ ಜೀವನ ನಡೆಸುತ್ತಾರೆ. ಐಷಾರಾಮಿ ಕಾರುಗಳಲ್ಲಿ ಓಡಾಡುತ್ತಾರೆ. ಅವರಿಗೆ ಬಡವರ ಕಷ್ಟ ಅರ್ಥವಾಗಲ್ಲ ಎಂದು ಹೇಳಿದರು.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಘಾಜಿಪುರದ ರ‍್ಯಾಲಿಯಲ್ಲಿ ಮಾತನಾಡಿದ ಅವರು, 100 ವರ್ಷಗಳಲ್ಲೇ ಅತ್ಯಂತ ಭೀಕರ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿಯೂ ಸರ್ಕಾರ ಉಚಿತವಾಗಿ ಪಡಿತರ ನೀಡುವ ಮೂಲಕ ಯಾರು ಸಹ ಖಾಲಿ ಹೊಟ್ಟೆಯಲ್ಲಿ ಮಲಗಲು ಬಿಟ್ಟಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆಳಗ್ಗೆಯಿಂದ ವಾಟ್ಸಪ್ ಸಂದೇಶಕ್ಕೆ ತಮ್ಮನಿಂದ ಉತ್ತರ ಬಂದಿಲ್ಲ: ವಿದ್ಯಾರ್ಥಿ ಸಹೋದರ

up election

ಘಾಜಿಪುರ ಈ ದೇಶಕ್ಕೆ ಅನೇಕ ಮಹಾನ್‌ ವ್ಯಕ್ತಿಗಳನ್ನು ನೀಡಿದೆ ಎಂದು ಸ್ಮರಿಸಿದ ಪ್ರಧಾನಿ ಮೋದಿ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಆಗಿ ಸೇವೆ ಸಲ್ಲಿಸುತ್ತಿರುವ ಘಾಜಿಪುರ ಮೂಲದ ಮನೋಜ್‌ ಸಿನ್ಹಾ ಅವರ ಹೆಸರನ್ನು ಪ್ರಸ್ತಾಪಿಸಿದರು.

ಪ್ರತಿಯೊಂದು ಮತವೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಲು ಸಹಕಾರಿಯಾಗಲಿದೆ. ಅಭಿವೃದ್ಧಿ ಕೆಲಸ ಮಾಡಲು ನಮಗೆ ಹೊಸ ಶಕ್ತಿ ನೀಡಿದಂತಾಗುತ್ತದೆ. ಪ್ರತಿ ಮತವೂ ಪರಿವಾರವಾದಿ ಪಕ್ಷಗಳಿಗೆ ತಕ್ಕ ಉತ್ತರ ನೀಡಲಿದೆ ಎಂದರು. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಪ್ರಯತ್ನ ನಿಲ್ಲಲ್ಲ: ಮೋದಿ

BJP Flag Final 6

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಫೆ.10ರಿಂದ ವಿವಿಧ ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮಾ.7ರಂದು ಘಾಜಿಪುರ ಜಿಲ್ಲೆಗೆ ಮತದಾನ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *