ಲಕ್ನೋ: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಉಕ್ರೇನ್ ಹಾಗೂ ರಷ್ಯಾ ನಡುವೆ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಹೇಮಾಮಾಲಿನಿ ತಿಳಿಸಿದರು.
ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಮೋದಿ ಅವರಿಂದ ಇಡೀ ಜಗತ್ತೇ ಬೆರಗಾಗುವಂತೆ ಭಾರತವನ್ನು ಅಭಿವೃದ್ಧಿಯಾಗುತ್ತಿದೆ. ಮೋದಿ ಅವರನ್ನು ವಿಶ್ವದ ಬಲಿಷ್ಠ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತಿದೆ ಎಂದ ಅವರು, ಈಗ ರಷ್ಯಾ ಉಕ್ರೇನ್ ಯುದ್ಧವನ್ನು ತಡೆಯಲು ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಎಲ್ಲರೂ ಬಯಸುತ್ತಿದ್ದಾರೆ ಎಂದರು.
Advertisement
Advertisement
ಈ ಹಿಂದೆ ರಷ್ಯಾವು ಉಕ್ರೇನ್‍ನ ನಗರಗಳ ಮೇಲೆ ದಾಳಿ ನಡೆಸುತ್ತಿದ್ದಂತೆ ಪ್ರಧಾನಿ ಮೋದಿ ಕರೆ ಮಾಡಿ ಹಿಂಸಾಚಾರವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಉಕ್ರೇನ್‍ನಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ
Advertisement
Advertisement
ಉತ್ತರಪ್ರದೇಶದ ವಿಧಾನಸಭೆ ಚುನಾವಣೆ 7 ಹಂತದಲ್ಲಿ ನಡೆಯಲಿದ್ದು, ಈಗಾಗಲೇ 4 ಹಂತದ ಮತದಾನ ನಡೆದಿದೆ. ಮಾರ್ಚ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್ ಸೇನೆ