ಲಕ್ನೋ: ಉತ್ತರ ಪ್ರದೇಶ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು ಆರಂಭದ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಬಿಜೆಪಿ 25, ಎಸ್‌ಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಪಡೆದರೂ ಮಧ್ಯಾಹ್ನದ ವೇಳೆ ಫಲಿತಾಂಶ ಸ್ಪಷ್ಟವಾಗಲಿದೆ. 2024ರ ಲೋಕಸಭಾ ಚುನಾವಣೆ ಮತ್ತು ರಾಷ್ಟ್ರಪತಿ ಚುನಾವಣೆಯಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸಲಿದೆ. ಇದನ್ನೂ ಓದಿ: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ- ಯುಪಿಯಲ್ಲಿ ಯಾರಿಗೆ ಒಲಿಯುತ್ತೆ ಅದೃಷ್ಟ?
Advertisement
ಚುನಾವಣೋತ್ತರ ಸಮೀಕ್ಷೆಗಳು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.
Advertisement
ಉತ್ತರ ಪ್ರದೇಶದಲ್ಲಿ ಒಟ್ಟು 403 ಕ್ಷೇತ್ರಗಳಿದ್ದು ಬಹುಮತಕ್ಕೆ 202 ಸ್ಥಾನಗಳು ಬೇಕು. 2017ರ ಚುನಾವಣೆಯಲ್ಲಿ ಬಿಜೆಪಿ 312, ಬಿಎಸ್‌ಪಿ 19, ಎಸ್‌ಪಿ+ಕಾಂಗ್ರೆಸ್ 54, ಇತರರು 18 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು.