ಲಕ್ನೋ: ಉತ್ತರಪ್ರದೇಶದ ವಾರಣಾಸಿಯಲ್ಲಿ ಇವಿಎಂನ್ನು ಅಕ್ರಮವಾಗಿ ಸಾಗಿಸಲಾಗಿದೆ ಎಂಬ ಅಖಿಲೇಶ್ ಯಾದವ್ ಅವರ ಆರೋಪದ ನಂತರ ಅಧಿಕಾರಿಯೊಬ್ಬರು ಲೋಪ ಮಾಡಿರುವುದಾಗಿ ಒಪ್ಪಿಕೊಂಡಿರುವ ವೀಡಿಯೋವೊಂದನ್ನು ಅವರ ಸಮಾಜವಾದಿ ಪಕ್ಷದ ನಾಯಕರು ಟ್ವೀಟ್ ಮಾಡಿದ್ದಾರೆ.
ವಾರಣಾಸಿಯ ಕಮಿಷನರ್ ದೀಪಕ್ ಅಗರ್ವಾಲ್ ಮಾತನಾಡಿ, ನೀವು ಇವಿಎಂಗಳ ಚಲನೆಯ ಪ್ರೋಟೋಕಾಲ್ ಬಗ್ಗೆ ಮಾತನಾಡಿದರೆ, ಪ್ರೋಟೋಕಾಲ್‍ನಲ್ಲಿ ಲೋಪವಿದೆ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಮತದಾನದಲ್ಲಿ ಬಳಸುವ ಯಂತ್ರಗಳನ್ನು ತೆಗೆದುಕೊಂಡು ಹೋಗುವುದು ಅಸಾಧ್ಯ ಎಂದು ತಿಳಿಸಿದ್ದಾರೆ.
Advertisement
Advertisement
ಎಣಿಕೆ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು, ಭದ್ರತಾ ಸಿಬ್ಬಂದಿ ಮತ್ತು ರಾಜಕೀಯ ಪಕ್ಷದ ಪ್ರತಿನಿಧಿಗಳು ಇದ್ದರು. ರಾಜಕೀಯ ಪಕ್ಷದ ಕಾರ್ಯಕರ್ತರು ಕಣ್ಣಿಡಲು ಕೇಂದ್ರಗಳ ಹೊರಗೆ ಕುಳಿತುಕೊಳ್ಳಬಹುದು ಎಂದರು. ಇದನ್ನೂ ಓದಿ: ವಾರಣಾಸಿಯಲ್ಲಿ EVM ಕಳವು: ಅಖಿಲೇಶ್ ಯಾದವ್ ಗಂಭೀರ ಆರೋಪ
Advertisement
EVM मूवमेंट में चुनाव आयोग के प्रोटोकॉल का पालन नहीं किया गया- कमिश्नर वाराणसी
कई जिलों में ईवीएम में हेरा-फेरी की जानकारी प्राप्त हो रही है। ये किसके इशारे पर हो रहा है? क्या अधिकारियों पर सीएम ऑफिस से दबाव बनाया जा रहा है?
चुनाव आयोग कृपया स्पष्ट करे @ECISVEEP @ceoup pic.twitter.com/D71xr8h8Tu
— Samajwadi Party (@samajwadiparty) March 9, 2022
Advertisement
ಈ ಬಗ್ಗೆ ಸಮಾಜವಾದಿ ಪಕ್ಷವು ಟ್ವಿಟ್ಟರ್‌ನಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದು, ಪ್ರೋಟೋಕಾಲ್ ಅನ್ನು ಅನುಸರಿಸಿಲ್ಲ ಎಂದು ಒಪ್ಪಿಕೊಳ್ಳಲಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಬಾಂಗ್ಲಾ ವಿದ್ಯಾರ್ಥಿಗಳ ರಕ್ಷಣೆ – ಮೋದಿಗೆ ಧನ್ಯವಾದ ತಿಳಿಸಿದ ಹಸೀನಾ
ವಿವಿಧ ಜಿಲ್ಲೆಗಳ ಇವಿಎಂಗಳಲ್ಲಿ ಉಲ್ಲಂಘನೆಯ ಮಾಹಿತಿ ಇದೆ. ಯಾರ ಆದೇಶದ ಮೇರೆಗೆ ಇದು ನಡೆಯುತ್ತಿದೆ?, ಅಧಿಕಾರಿಗಳು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಚೇರಿಯ ಒತ್ತಡಕ್ಕೆ ಒಳಗಾಗಿದ್ದಾರೆಯೇ? ಇವೆಲ್ಲವನ್ನು ಚುನಾವಣಾ ಆಯೋಗವು ಸ್ಪಷ್ಟಪಡಿಸಬೇಕು ಎಂದು ಸಮಾಜವಾದಿ ಪಕ್ಷ ಒತ್ತಾಯಿಸಿದೆ.
वाराणसी में EVM पकड़े जाने का समाचार उप्र की हर विधानसभा को चौकन्ना रहने का संदेश दे रहा है।
मतगणना में धांधली की कोशिश को नाकाम करने के लिए सपा-गठबंधन के सभी प्रत्याशी और समर्थक अपने-अपने कैमरों के साथ तैयार रहें।
युवा लोकतंत्र व भविष्य की रक्षा के लिए मतगणना में सिपाही बने!
— Akhilesh Yadav (@yadavakhilesh) March 8, 2022
ನಿನ್ನೆ ಮತ ಎಣಿಕೆ ಕೇಂದ್ರದಿಂದ ಇವಿಎಂ ತೆಗೆದುಕೊಂಡು ಹೋಗಿರುವ ಸಂಬಂಧ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್, ವಾರಣಾಸಿಯ ಡಿಎಂ ಸ್ಥಳೀಯ ಅಭ್ಯರ್ಥಿಗಳಿಗೆ ಮಾಹಿತಿ ನೀಡದೆಯೇ ಮತಗಟ್ಟೆಗಳಿಂದ ಇವಿಎಂ ಸಾಗಿಸುತ್ತಿದ್ದಾರೆ. ಇದನ್ನು ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದರು.