ಲಕ್ನೋ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ನಗರ ಸುಂದರವಾಗಿ ಕಂಗೊಳಿಸಲು ಯುಪಿ ಸರ್ಕಾರ ನಾನಾ ಕಸರತ್ತು ಮಾಡ್ತಿದ್ದು, ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವ ಯಮುನಾ ನದಿಯ ಸೌಂದರ್ಯ ಹೆಚ್ಚಿಸಲು ಸರ್ಕಾರ ನದಿಗೆ ನೀರು ಹರಿಸಿದೆ.
ಗುಜರಾತಿನ ಅಹಮದಾಬಾದಿನಲ್ಲಿ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನೆ, ಭಾರತದ ಜೊತೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಡೊನಾಲ್ಡ್ ಟ್ರಂಪ್ ಭಾರತಕ್ಕೆ ಬರುತ್ತಿದ್ದಾರೆ. ಟ್ರಂಪ್ ಭೇಟಿ ವೇಳೆ ನದಿಯ ಪರಿಸರ ಸುಂದರವಾಗಿ ಕಾಣಬೇಕು ಎನ್ನುವ ಉದ್ದೇಶದಿಂದ ಉತ್ತರಪ್ರದೇಶದ ನೀರಾವರಿ ಇಲಾಖೆಯು ಯಮುನಾ ನದಿಗೆ 500 ಕ್ಯೂಸೆಕ್ ನೀರನ್ನು ಹರಿಸಿದೆ.ಇದನ್ನೂ ಓದಿ: ಭಾರತಕ್ಕೆ ಬರಲಿರುವ ಟ್ರಂಪ್ ಏನು ತಿನ್ನುತ್ತಾರೆ? ಫೇವರೇಟ್ ಆಹಾರ ಏನು?
Advertisement
Advertisement
ಆಗ್ರಾಗೆ ಟ್ರಂಪ್ ಭೇಟಿ ನೀಡುತ್ತಾರೆಂಬ ಮಾಹಿತಿ ಇರುವ ಹಿನ್ನೆಲೆ ನದಿಗೆ 500 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಫೆಬ್ರವರಿ 20ರಂದು ಮಥುರಾದ ಯಮುನಾ ನದಿಗೆ ಹರಿಬಿಟ್ಟಿರುವ ನೀರು ಸೇರಲಿದ್ದು, ಬಳಿಕ ಫೆಬ್ರವರಿ 21ರಂದು ನೀರು ಆಗ್ರಾ ತಲುಪಲಿದೆ. ನದಿಗೆ ನೀರು ಹರಿಸಿರುವುದರಿಂದ ಅಲ್ಲಿ ಬರುತ್ತಿದ್ದ ದುರ್ನಾತ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತೆ. ನದಿಯ ಪರಿಸರವೂ ಕೂಡ ಮತ್ತಷ್ಟು ಸುಂದರವಾಗುತ್ತೆ ಎಂದು ಅಧಿಕಾರಿ ಧರ್ಮೇಂದರ್ ಸಿಂಗ್ ಫೋಗಟ್ ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಂಪ್ ಜೊತೆಗೆ ಭಾರತಕ್ಕೆ ಬರುತ್ತಿದೆ ದಿ ಬೀಸ್ಟ್ ಕಾರ್- ಕಾರಿನ ವಿಶೇಷತೆ ಏನು? ಮೈಲೇಜ್ ಎಷ್ಟು?
Advertisement
Advertisement
ಅಲ್ಲದೇ ಮಾಲಿನ್ಯವನ್ನು ನಿಯಂತ್ರಿಸಲು 500 ಕ್ಯೂಸೆಕ್ ನೀರನ್ನು ಯಮುನಾ ನದಿಗೆ ಹರಿಬಿಡಲಾಗುತ್ತಿದೆ. ಇದು ನದಿ ಮೇಲೆ ಕೆಲ ಪರಿಣಾಮ ಬೀರಲಿದೆ. ಇದರಿಂದ ಮಥುರಾ ಹಾಗೂ ಆಗ್ರಾದಲ್ಲಿ ಹರಿಯುವ ಯುವನಾ ನದಿ ಆಮ್ಲಜನಕವನ್ನು ಹೆಚ್ಚಿಸುತ್ತದೆ. ನೀರು ಹರಿಸಿದ ಮಾತ್ರಕ್ಕೆ ಈ ನದಿ ನೀರು ಕುಡಿಯಲು ಯೋಗ್ಯವಾಗಲ್ಲ ಆದರೆ ನದಿಯ ದುರ್ವಾಸನೆ ದೂರವಾಗುತ್ತೆ ಎಂದು ಅಧಿಕಾರಿ ಹೇಳಿದ್ದಾರೆ.
ಅಮೆರಿಕದ ಅನಿವಾಸಿ ಭಾರತೀಯರು ಹೂಸ್ಟನ್‍ನಲ್ಲಿ ಆಯೋಜಿಸಿದ್ದ `ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಟ್ರಂಪ್ ಭಾಗವಹಿಸಿದ್ದರು. ಅಲ್ಲಿನ ಅನಿವಾಸಿ ಭಾರತೀಯರ ಜೊತೆಗೆ ಕೆಲ ವಿಚಾರಗಳನ್ನು ಹಂಚಿಕೊಳ್ಳಲು ಪ್ರಧಾನಿ ಮೋದಿ ಅವರಿಗೆ ಸಹಾಯಕವಾಗಿತ್ತು. ಹೀಗಾಗಿ ಭಾರತಕ್ಕೆ ಆಗಮಿಸುತ್ತಿರುವ ಟ್ರಂಪ್ ಅವರಿಗೆ ಇಂತಹದ್ದೇ ವೇದಿಕೆ ಕಲ್ಪಿಸಿಕೊಡಲು `ಕೇಮ್ ಚೋ ಟ್ರಂಪ್’ ಸಾರ್ವಜನಿಕ ಸಭೆಗೆ ಭಾರೀ ಸಿದ್ಧತೆ ನಡೆದಿದೆ.
ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಫೆಬ್ರವರಿ 24 ಹಾಗೂ 25 ರಂದು ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಮೆರಿಕ ಫಸ್ಟ್ ಲೇಡಿ ಮೆಲಾನಿಯಾ ಟ್ರಂಪ್ ಕೂಡ ಭಾರತಕ್ಕೆ ಆಗಮಿಸುತ್ತಿದ್ದಾರೆ. ನವದೆಹಲಿಗೆ ಆಗಮಿಸಲಿರುವ ಡೊನಾಲ್ಡ್ ಟ್ರಂಪ್ ಅವರು ಫೆಬ್ರವರಿ 25 ರಂದು ಗುಜರಾತ್‍ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಜಂಟಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.